Sunday, April 19, 2026
Homeರಾಜ್ಯಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ವಿರುದ್ಧ ದೂರು ನೀಡಿದ್ದ ಮಹಿಳೆ ಯೂಟರ್ನ್‌

ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ವಿರುದ್ಧ ದೂರು ನೀಡಿದ್ದ ಮಹಿಳೆ ಯೂಟರ್ನ್‌

Women statement against Jaya Mruthyunjaya Swamiji

ಬೆಂಗಳೂರು,ಏ.13- ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ ಮಾಡಿದ್ದ ಮಹಿಳೆ ಈಗ ಉಲ್ಟಾ ಹೊಡೆದಿದ್ದಾರೆ.

ತಮ್ಮ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್‌, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಕೊಟ್ಟಿದ್ದರು.

ಇದೀಗ ಉಲ್ಟಾ ಹೊಡೆದಿರುವ ಮಹಿಳೆ , ನಾನು ಯಾರೊಬ್ಬರಿಗೂ ದೂರನ್ನೇ ಕೊಟ್ಟಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದವು. ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ನನ್ನ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ. ಅಲ್ಲದೆ ನಾನು ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತೇನೆಂಬ ಆರೋಪ ಕೇಳಿ ಮನಸ್ಸಿಗೆ ನೋವಾಗಿದೆ. ನಾವು ಹಣ ಕೇಳುವ ದುಸ್ಥಿತಿಗೆ ಬಂದಿಲ್ಲ. ಇದರ ಹಿಂದೆ ಯಾರಿದ್ದಾರೋ ಎಂಬುದು ಗೊತ್ತೂ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಮಹಿಳೆಯ ದೂರಿನಲ್ಲಿ ಏನಿತ್ತು?
ಬೆಂಗಳೂರು ನಿವಾಸಿಯಾಗಿರುವ ನಾನು, ಲಿಂಗಾಯತ ಸಮಾಜಕ್ಕೆ ಸೇರಿದವಳಾಗಿದ್ದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೀಠಾಧಿಪತಿಗಳು, ಮಹಾಪೀಠ ಕೂಡಲ ಸಂಗಮ, ಇವರ ಭಕ್ತಳಾಗಿದ್ದು, ಬೆಂಗಳೂರಿಗೆ ಬಂದಾಗ ಹಲವು ಬಾರಿ ಭೇಟಿಯಾಗಿ ಮಾತನಾಡಿ ಅವರ ಹೋರಾಟಗಳ ಬಗ್ಗೆ ಬೆಂಬಲವನ್ನು ಸಹ ನೀಡಿದ್ದೆನು.

ಹೀಗೆ ಪರಿಚಯವಾಗಿದ್ದ ಸ್ವಾಮೀಜಿಯವರು ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ಮಾತನಾಡುತ್ತಾ ಅಸಭ್ಯವಾದ ಪದಗಳನ್ನು ಬಳಸಿ, ಮೈ ಕೈಯನ್ನು ಮುಟ್ಟುತ್ತ ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದು, ಆ ಸಮಯದಲ್ಲಿ ನನ್ನ ತಿಳಿವಳಿಕೆಯಿಲ್ಲದೆ ನನ್ನ ಮೇಲೆ ಅವರು ನಡೆಸಿರುವ ಲೈಂಗಿಕ ದೌರ್ಜನ್ಯದ ಖಾಸಗಿ ವಿಡಿಯೋ ಮಾಡಿಕೊಂಡು ನನ್ನನ್ನು ಬ್ಲಾಕ್‌ ಮೇಲ್‌ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್‌ ಮಾಡಿ ಬೆತ್ತಲೆ ವಿಡಿಯೋ ಕಾಲ್‌ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗುತ್ತಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.

RELATED ARTICLES

Latest News