Tuesday, May 21, 2024
Homeರಾಷ್ಟ್ರೀಯಇಂದೋರ್‌ನಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು

ಇಂದೋರ್‌ನಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು

ಇಂದೋರ್‌, ಮೇ 16- ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ತಡರಾತ್ರಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಎಂಟು ಜನರು ಸಾವನ್ನಪ್ಪಿದ್ದಾರೆ. ಇಂದೋರ್‌-ಅಹಮದಾಬಾದ್‌ ರಾಷ್ಟ್ರೀಯ ಹೆದ್ದಾರಿಯ ಘಾಟಾಬಿಲ್ಲೋಡ್‌ ಬಳಿ ಜೀಪ್‌ಗೆ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್‌‍ ವರಿಷ್ಠಾಧಿಕಾರಿ (ಎಎಸ್ಪಿ) ರೂಪೇಶ್‌ ಕುಮಾರ್‌ ದ್ವಿವೇದಿ ತಿಳಿಸಿದ್ದಾರೆ.

ಎಂಟು ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅಪಘಾತದ ನಂತರ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ.

ಮೃತರೆಲ್ಲರೂ ಗುನಾ ಜಿಲ್ಲೆಗೆ ಸೇರಿದವರೆಂದು ತಿಳಿದು ಬಂದಿದ್ದು, ಗುರುತು ಪತ್ತೆ ಹಚ್ಚಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

RELATED ARTICLES

Latest News