ಜೂನ್ ತಿಂಗಳೊಳಗೆ 8 ಸಾವಿರ ಶಾಲಾ ಕೊಠಡಿಗಳು ನಿರ್ಮಾಣ : ಸಿಎಂ

Social Share

ಬೆಂಗಳೂರು,ಫೆ.20-ಪ್ರಸಕ್ತ ಜೂನ್ ತಿಂಗಳ ಒಳಗೆ ರಾಜ್ಯಾದ್ಯಂತ ಎಂಟು ಸಾವಿರ ಶಾಲಾ ಕೊಠಡಿಗಳು ನಿರ್ಮಾಣ ಪೂರ್ಣಗೊಳ್ಳಿದ್ದು, ಇದಕ್ಕೆ ವಿವೇಕ ಎಂದು ಹೆಸರು ಇಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸಿದ ಅವರು, ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಒಟ್ಟು 8 ಸಾವಿರ ಶಾಲಾ ಕೊಠಡಿಗಳನ್ನು ಹೊಸದಾಗಿ ನಿರ್ಮಾಣ ಮಾಡಲಿದೆ. ಹಿಂದಿನ ಯಾವುದೇ ಸರ್ಕಾರಗಳು ಏಕಕಾಲದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಇಷ್ಟು ನೀಡುತ್ತಿದ್ದೇವೆ. ನಮ್ಮ ಸರ್ಕಾರ ಶಿಕ್ಷಣಕ್ಕೆ ನೀಡುತ್ತಿರುವ ಆದ್ಯತೆ ಇದಾಗಿದೆ ಎಂದರು.

ಡಿಜಿಟಲ್ ಮೀಟರ್ ಅಳವಡಿಕೆಯಿಂದ ದುಪ್ಪಟ್ಟಾಯ್ತು ಕರೆಂಟ್ ಬಿಲ್..!

8 ಸಾವಿರದ ಜೊತೆಗೆ ಸಂಘಸಂಸ್ಥೆಗಳು, ದಾನಿಗಳು ಸೇರಿದಂತೆ ಮತ್ತಿತರರು 1556 ಕೊಠಡಿಗಳನ್ನು ನಿರ್ಮಿಸಿಕೊಡುತ್ತಿದ್ದಾರೆ. ಇದಕ್ಕಾಗಿ 1900 ಕೋಟಿ ಹಣವನ್ನು ಒದಗಿಸಿದ್ದೇವೆ ಎಂದು ತಿಳಿಸಿದರು.

ಕಳೆದ ವರ್ಷ ನಮ್ಮ ಸರ್ಕಾರ 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡಿತ್ತು.ಇದನ್ನು ಕೆಲವರು ಪ್ರಶ್ನಿಸಿ ಹೈಕೋರ್ಟ್‍ಗೆ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯದಲ್ಲಿ ಅರ್ಜಿ ಇತ್ಯರ್ಥವಾಗಿದೆ. ಶೀಘ್ರದಲ್ಲೇ ನೇಮಕಾತಿ ಆದೇಶ ಪತ್ರ ನೀಡಲಾಗುವುದು. 15 ಸಾವಿರದಲ್ಲಿ ಕಲ್ಯಾಣಕರ್ನಾಟಕಕ್ಕೆ 5 ಸಾವಿರ ಮೀಸಲಿಟ್ಟಿದ್ದೇವೆ. ಮುಂದಿನ ವರ್ಷವು ಕೂಡ ನೇಮಕಾತಿ ಅಗತ್ಯವಿದೆ. ಎಲ್ಲೆಲ್ಲಿ ಶಿಕ್ಷಕರ ಅಗತ್ಯವಿದೆಯೋ ಅಂತಹ ಕಡೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಉತ್ತರಿಸಿದರು.

ಸಿಎಂ ಉತ್ತರದ ನಡುವೆ ಮಧ್ಯಪ್ರವೇಶಿಸಿ ಮಾತನ್ನಾಡಿದ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ, ಇಂದು ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಮಕ್ಕಳು ಶಿಕ್ಷಣ ಬಿಡುತ್ತಿದ್ದಾರೆ. ಶಾಲಾ ಮಕ್ಕಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಮಕ್ಕಳ ಮನವೊಲಿಕೆ ಹೇಗೆ ಮಾಡಲಾಗುತ್ತಿದೆ ಎಂದರು.

ರಾಮನಗರದ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಯೋಗಿ

ಮಕ್ಕಳನ್ನು ಶಿಕ್ಷಣದತ್ತ ಕರೆತರುವುದು ಹೇಗೆ ಮಾಡುತ್ತೀರಾ ? ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ, ನಿಮ್ಮ ಮಾತು ಸತ್ಯ, ಅದು ಗಮನದಲ್ಲಿದೆ. ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು. ಮಕ್ಕಳನ್ನ ಶಾಲೆಗೆ ಕರೆತರುವ ಗಮನ ಆಗಬೇಕು. ಸರ್ಕಾರದಿಂದಷ್ಟೇ ಅಲ್ಲ ಬೇರೆ ಕಡೆಯಿಂದ ಆಗಬೇಕು ಎಂದರು.

eight, thousand, school, rooms, Construction, CM Bommai,

Articles You Might Like

Share This Article