Friday, July 19, 2024
Homeರಾಷ್ಟ್ರೀಯBIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

BIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

ನವದೆಹಲಿ,ಅ.9- ತೀವ್ರ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 7 ರಿಂದ ನವೆಂಬರ್ 30 ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರೋಂ ರಾಜ್ಯಗಳ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಮತದಾನ ನಡೆದರೆ ನಕ್ಸಲ್‍ಪೀಡಿತ ಛತ್ತೀಸ್‍ಗಢದಲ್ಲಿ ಎರಡು ಹಂತದಲ್ಲಿ ಮತದಾನ ಜರುಗಲಿದೆ. ಸೋಮವಾರ ನವದೆಹಲಿಯಲ್ಲಿ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ಪ್ರಕಟಿಸಿದರು.

ರಾಜ್ಯದಲ್ಲಿ ಒಂದು ವಾರ ಮಳೆ ಸಾಧ್ಯತೆ

ಈ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಸೋಮವಾರದಿಂದಲೇ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಸರ್ಕಾರಿ ಕಾರು, ವಾಹನಗಳು ಸೇರಿದಂತೆ ಸವಲತ್ತುಗಳಿಗೆ ನಿರ್ಬಂಧ ಹಾಕಲಾಗಿದೆ.90 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ನಕ್ಸಲ್‍ಪೀಡಿತ ಛತ್ತೀಸ್‍ಗಢದಲ್ಲಿ ನವೆಂಬರ್ 7 ರಂದು ಮೊದಲ ಹಂತದಲ್ಲಿ 20 ಕ್ಷೇತ್ರ ಹಾಗೂ ನವೆಂಬರ್ 17 ರಂದು 70 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

230 ವಿಧಾನಸಭಾ ಕ್ಷೇತ್ರ ಹೊಂದಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17, 200 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ರಾಜಸ್ತಾನದಲ್ಲಿ ನವೆಂಬರ್ 23, 40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಿಜೊರಾಂನಲ್ಲಿ ನವೆಂಬರ್ 7, 119 ಕ್ಷೇತ್ರಗಳನ್ನು ಒಳಗೊಂಡಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ಜರುಗಲಿದೆ.

ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಈ ಬಾರಿಯೂ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಹಿಂದಿಗಿಂತಲೂ ಬಿಗಿಯಾದ ನಿಯಮಗಳನ್ನು ರೂಪಿಸಲಾಗಿದೆ.

ಮೂರು ಸ್ನೇಹಿತರ ಪ್ರೇಮಕಥೆ ಅಭಿರಾಮಚಂದ್ರ

ಐದೂ ರಾಜ್ಯಗಳ 679 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 17,734 ಮಾದರಿ ಮತಗಟ್ಟೆ ಕೇಂದ್ರಗಳು ಇರಲಿವೆ. 621 ಮತಗಟ್ಟೆಗಳನ್ನು ಅಂಗವಿಕಲ ಸಿಬ್ಬಂದಿಯು ನಿರ್ವಹಿಸಲಿದ್ದಾರೆ. 8,192 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಲಿದ್ದಾರೆ.

RELATED ARTICLES

Latest News