ಮತದಾರರ ಮಾಹಿತಿ ಕಳುವು ಕುರಿತು ಚುನಾವಣಾ ಆಯೋಗದಿಂದ ತನಿಖೆ

Social Share

ಬೆಂಗಳೂರು, ನ.18- ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಈ ಆರೋಪ ಕುರಿತಂತೆ ಸಮಗ್ರ ತನಿಖೆ ನಡೆಸಲು ತೀರ್ಮಾನಿಸಿದೆ.

ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಆಯೋಗ ಈ ತೀರ್ಮಾನ ಕೈಗೊಂಡಿದೆ.

ಇಂತಹ ಆರೋಪಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಮೇಲೆ ಅನುಮಾನ ಮೂಡುವುದರಿಂದ ಈ ಕುರಿತಂತೆ ಸಂಪೂರ್ಣ ತನಿಖೆ ನಡೆಸಲು ಪ್ರಾದೇಶಿಕ ಆಯುಕ್ತರನ್ನು ತನಿಖಾಕಾಧಿರಿಯನ್ನಾಗಿ ನೇಮಕ ಮಾಡಲಾಗಿದೆ.

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ಬೆಂಗಳೂರು ಪ್ರಾಂತ್ಯದ ಪ್ರಾದೇಶಿಕ ಆಯುಕ್ತರಾಗಿರುವ ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಬಿಸ್ವಾಸ್ ಅವರನ್ನು ತನಿಖಾಕಾಧಿರಿಗಳನ್ನಾಗಿ ಚುನಾವಣಾ ಆಯೋಗ ನಿಯೋಜನೆ ಮಾಡಿದೆ.

ರಾಷ್ಟ್ರೀಯ ನಾಯಕರನ್ನು ಕರೆತಂದು ಸಾಲು ಸಾಲು ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ

Articles You Might Like

Share This Article