ಬೆಂಗಳೂರು,ಸೆ.18- ಚುನಾವಣಾ ಆಯೋಗ ಬಿಜೆಪಿ ಕೈಗೊಂಬೆಯಾಗಿದ್ದು, ಪ್ರಧಾನಿ ಹೇಳಿದಂತೆ ಕೇಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರು ಮತಗಳವು ಆರೋಪವನ್ನು ಮಾಡಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಮೂರನೇ ಅವಧಿಯಲ್ಲಿ ಜನಪ್ರಿಯತೆ ಕಡಿಮೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಹವಾ ಕೂಡ ಕಡಿಮೆಯಾಗಿದ್ದು, ವಿರೋಧಪಕ್ಷಗಳ ಮತ ತೆಗೆದು ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ಬಿಜೆಪಿ ಅಧಿಕಾರ ಇರುವ ಕಡೆ ಇದು ಹೆಚ್ಚು ನಡೆಯುತ್ತದೆ. ಈ ರೀತಿ ಮಾಡದಿದ್ದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಿರಲಿಲ್ಲ. ಗಾಂಧಿನಗರ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಬಳಸಲಾಗಿದೆ. ಇಂತಹುದನ್ನು ಮಾಡುವ ಮೂಲಕ ಬಿಜೆಪಿಯವರು ಅಧಿಕಾರಕ್ಕೆ ಬರುತ್ತಿದ್ದಾರೆ ಎಂದು ಟೀಕಿಸಿದರು.
ಮಾಲೂರು ಶಾಸಕ ನಂಜೇಗೌಡ ಅವರ ಆಯ್ಕೆ ಅಸಿಂಧು ವಿಚಾರ, ನ್ಯಾಯಾಲಯಕ್ಕೆ ಬಿಟ್ಟದ್ದು. ನಮಿಂದ ಅಕ್ರಮ ಆಗಿಲ್ಲ. ಚುನಾವಣೆ ನಡೆದಾಗ ಬಿಜೆಪಿ ಸರ್ಕಾರ ಆಡಳಿತದಲ್ಲಿತ್ತು ಎಂದರು.