ಶೇಷನ್ ಅವರಂತಹ ಚುನಾವಣಾ ಆಯುಕ್ತರ ಅವಶ್ಯಕತೆಯಿದೆ : ಸುಪ್ರೀಂ

Social Share

ನವದೆಹಲಿ,ನ.23- ಟಿ.ಎನ್.ಶೇಷನ್ ಅವರಂತಹ ದಕ್ಷ ಅಧಿಕಾರಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸುವ ಅವಶ್ಯಕತೆ ಇದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣಾ ಆಯುಕ್ತರ ನೇಮಕ ವ್ಯವಸ್ಥೆಯಲ್ಲಿ ಸುಧಾರಣೆ ತರುವಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಸಂವಿಧಾನ ಪೀಠ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಗಾಧ ಅಧಿಕಾರ ಹೊಂದಿರುವ ಮುಖ್ಯ ಚುನಾವಣಾ ಆಯುಕ್ತರ ಹುದ್ದೆಯನ್ನು ದುರ್ಬಲ ವ್ಯಕ್ತಿಗಳನ್ನು ನಿಯೋಜನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಧೋರಣೆ ಸರಿಯಲ್ಲ. ಸಿಇಸಿ ಸ್ಥಾನಕ್ಕೆ ಈ ಹಿಂದೆ 1990 ರಿಂದ 1996 ರವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಟಿ.ಎನ್.ಶೇಷನ್ ಅಂತಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ಪೀಠ ಸಲಹೆ ನೀಡಿದೆ.

ಬೆಳ್ಳಂ ಬೆಳಗ್ಗೆ ಜೆಸಿಬಿ ಘರ್ಜನೆ : 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಸಂವಿಧಾನ ಪೀಠದಲ್ಲಿರುವ ಚುನಾವಣಾ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ ಟಿ ರವಿಕುಮಾರ್ ಅವರಗಳು ಅತ್ಯುತ್ತಮ ವ್ಯಕ್ತಿಯೊಬ್ಬರನ್ನು ಸಿಇಸಿ ಆಗಿ ಆಯ್ಕೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಬೇಕಿದೆ ಎಂದು ಸೂಚನೆ ನೀಡಿದೆ.

1990ರಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವಾರು ಮಂದಿ ಚುನಾವಣಾ ಆಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮುಖ್ಯಸ್ಥರ ನೇಮಕಕ್ಕೆ ಕೊಲಿಜಿಯಂ ಮಾದರಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದರು. ಈಗ ಅಂತಹ ಸನ್ನಿವೇಶ ನಿರ್ಮಾಣವಾಗಿರುವುದರಿಂದ ಸರ್ಕಾರ ಶ್ರೇಷ್ಠ ವ್ಯಕ್ತಿಗಳನ್ನು ಸಿಇಸಿಯಾಗಿ ನೇಮಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಪೀಠ ಸಲಹೆ ನೀಡಿದೆ.

ಜೆಡಿಎಸ್ ನಲ್ಲಿ ಮುಸ್ಲಿಮರು ಸಿಎಂ ಆಗಬಹುದು : ಹೆಚ್‌ಡಿಕೆ

ಪ್ರಜಾಪ್ರಭುತ್ವವು ಸಂವಿಧಾನದ ಮೂಲ ರಚನೆಯಾಗಿದೆ. ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಾವು ಸಂಸತ್ತಿಗೆ ಏನಾದರೂ ಮಾಡಲು ಹೇಳಲು ಸಾಧ್ಯವಿಲ್ಲ ಮತ್ತು ನಾವು ಅದನ್ನು ಮಾಡುವುದಿಲ್ಲ. ಆದರೆ, ಸಾಂವಿಧಾನಿಕ ಸಂಸ್ಥೆಗಳಿಗೆ ಅತ್ಯುತ್ತಮ ಮುಖ್ಯಸ್ಥರನ್ನು ನೇಮಿಸಬೇಕು ಎನ್ನುವುದು ನ್ಯಾಯಾಲಯದ ಅಭಿಪ್ರಾಯವಾಗಿದೆ ಎಂದು ಪೀಠ ತಿಳಿಸಿದೆ.

ಮೋಜಿನ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದವನ ಬಂಧನ

ನಾವು 1990 ರಿಂದ ಎತ್ತಿರುವ ಸಮಸ್ಯೆಗೆ ಏನಾದರೂ ಮಾಡಲು ಬಯಸುತ್ತೇವೆ ನ್ಯಾಯಾಲಯ ಹೇಳಿದೆ. ಭೂಮಿಯ ಪರಿಸ್ಥಿತಿಯು ಆತಂಕಕಾರಿಯಾಗಿದೆ. ಆಡಳಿತ ಪಕ್ಷದಿಂದ ಕಳೆದ 2004 ರಿಂದ ಯಾವುದೇ ಸಿಇಸಿಗಳು ಆರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ . ಯುಪಿಎ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ ಆರು ಸಿಇಸಿಗಳು ಮತ್ತು ಎನ್‍ಡಿಎ ಸರ್ಕಾರದ ಎಂಟು ವರ್ಷಗಳಲ್ಲಿ ಎಂಟು ಸಿಇಸಿಗಳನ್ನು ನೇಮಕ ಮಾಡಲಾಗಿದೆ ಎನ್ನುವುದನ್ನು ನ್ಯಾಯಲಯ ಉಲ್ಲೇಖಿಸಿದೆ.

Election, commission, needs, person, like, T N Seshan, Supreme Court,

Articles You Might Like

Share This Article