ಮತದಾರರಿಗೆ ಆಮಿಷ : ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ನವದೆಹಲಿ, ಮಾ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಕಾರಿಗೆ ಸೂಚನೆ ನೀಡಿದೆ. ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಯೋಗಕ್ಕೆ ಪತ್ರ ಬರೆದಿದ್ದರು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ … Continue reading ಮತದಾರರಿಗೆ ಆಮಿಷ : ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ