ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಆಯೋಗ ಸಿದ್ಧತೆ

Social Share

ಬೆಂಗಳೂರು,ಮಾ.10- ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಜ್ಜಾಗುವಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಚುನಾವಣೆ ಪೂರ್ವ ಸಿದ್ದತೆ ಕುರಿತ ಸಭೆಯಲ್ಲಿ ಜಿಲ್ಲಾವಾರು ಮಾಹಿತಿಯನ್ನು ಜಿಲ್ಲಾಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳಿಂದ ಪಡೆದು ಅಗತ್ಯ ಸಲಹೆ ಹಾಗೂ ನಿರ್ದೇಶನಗಳನ್ನು ನೀಡಿದರು.

ಕೆಲವು ಅಧಿಕಾರಿಗಳು ನಿರ್ದಿಷ್ಟ ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದಾರೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಂದ ದೂರುಗಳು ಬಂದಿವೆ. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸೇವಕರೇ ಹೊರತು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಬಾರದು.

BIG NEWS : ಬಿಜೆಪಿ ಸೇರಲ್ಲ, ಬೆಂಬಲಿಸುತ್ತೇನೆ ಅಷ್ಟೇ – ಸುಮಲತಾ ಅಂಬರೀಷ್

ಹಾಗೊಂದು ವೇಳೆ ಕಂಡುಬಂದರೆ ಕಾನೂನು ರೀತಿ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. ಮತದಾರರ ಪಟ್ಟಿಯಿಂದ ಅನಗತ್ಯವಾಗಿ ಹೆಸರುಗಳನ್ನು ತೆಗೆದು ಹಾಕಿರುವುದರ ಬಗ್ಗೆ ದೂರು ಬಂದಿವೆ. ಮತದಾನ ಸಂವಿಧಾನ ನೀಡಿರುವ ಹಕ್ಕು ಇದರಿಂದ ಯಾವ ಪ್ರಜೆಗಳು ಅವಕಾಶ ವಂಚಿತರಾಗಬಾರದು. ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಗಡಿಭಾಗಗಳ ಚೆಕ್‍ಪೋಸ್ಟ್‍ಗಳಲ್ಲಿ ಭದ್ರತೆ ಹೆಚ್ಚಿಸುವುದು, ಹೊರರಾಜ್ಯಗಳಿಂದ ವಾಹನಗಳನ್ನು ತಪಾಸಣೆ ಮಾಡುವುದು, ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಮತ್ತಿತರ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದರು.

ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು, ಬೆಂಬಲಿಗರು, ಹಣ, ನಗದು, ಉಡುಗೊರೆ ನೀಡುತ್ತಿರುವುದರ ಬಗ್ಗೆಯೂ ದೂರುಗಳು ಬರುತ್ತಿವೆ. ಈ ಬಗ್ಗೆ ವಿಶೇಷವಾಗಿ ಗಮನಹರಿಸಬೇಕು. ಪಕ್ಷಪಾತ ಮಾಡದೆ ನಿಷ್ಪಕ್ಷಪಾತವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆಯಾಗಿದ್ದು, ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕ್ಷೇತ್ರವಾರು ಮತಗಟ್ಟೆ ಸ್ಥಾಪನೆ, ಸೂಕ್ಷ್ಮ,ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಬೇಕಾದ ಸಿದ್ದತೆ ಮಾಡಿರುವ ಬಗ್ಗೆ ಮಾಹಿತಿಯನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು.

ಕಾಂಗ್ರೆಸ್‌ಗೆ ಜಂಪ್ ಮಾಡಲು ಸೋಮಣ್ಣ, ನಾರಾಯಣಗೌಡ, ಪೂರ್ಣಿಮ ತಯಾರಿ

ಚುನಾವಣೆಗೆ ಅಗತ್ಯವಿರುವ ಭದ್ರತೆ ಒದಗಿಸುವ ಬಗ್ಗೆಯೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಿದರೆ ಹೇಗೆ? ಅಥವಾ ಎರಡು ಹಂತದಲ್ಲಿ ಚುನಾವಣೆ ನಡೆಸಿದರೆ ಸೂಕ್ತವೇ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆಯಾ ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುವ ಹಬ್ಬ, ಉತ್ಸವಗಳ ಮಾಹಿತಿಯೂ ಪಡೆಯಲಾಯಿತು. 34 ಜಿಲ್ಲಾ ಚುನಾವಣಾಧಿಕಾರಿಗಳಿಂದಲೂ ಮಾಹಿತಿ ಪಡೆದು ಚುನಾವಣೆ ನಡೆಸಲು ಚುನಾವಣಾ ಸಿಬ್ಬಂದಿಗೆ ಅಗತ್ಯ ತರಬೇತಿ, ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಸೇರಿದಂತೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.

ರಾಜಕೀಯ ಪಕ್ಷಗಳ ಪ್ರತಿನಿಗಳು ನಿನ್ನೆ ನೀಡಿರುವ ಅಭಿಪ್ರಾಯವನ್ನು ಆಧರಿಸಿ ಚರ್ಚೆ ನಡೆಸಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆರೋಪಗಳ ಕುರಿತಂತೆಯೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

ಜರ್ಮನಿಯಲ್ಲಿ ಗುಂಡಿನ ದಾಳಿ, 10 ಮಂದಿ ಬಲಿ

ಮೂರು ದಿನಗಳ ಭೇಟಿಗಾಗಿ ನಿನ್ನೆ ಆಗಮಿಸಿದ ಈ ತಂಡವು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯವನ್ನು ಆಲಿಸಲಾಗಿತ್ತು.

ಚುನಾವಣಾ ಆಯೋಗದ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್, ಉಪಾಯುಕ್ತರು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Election, commission, preparation, elections,

Articles You Might Like

Share This Article