Saturday, July 13, 2024
Homeಇದೀಗ ಬಂದ ಸುದ್ದಿವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮೇ 17- ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಗೆ 103 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಒಟ್ಟು 54 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮೇ 9 ರಿಂದ ನಿನ್ನೆಯವರೆಗೆ 100 ಪುರುಷರು, 100 ಮಹಿಳೆಯರು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಬಿಜೆಪಿ 5, ಕಾಂಗ್ರೆಸ್‌‍ 6, ಜೆಡಿಎಸ್‌‍ 2, ಆರ್‌ಯುಪಿಪಿ 7, ಪಕ್ಷೇತರರು 83 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಒಟ್ಟು 156 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ಸಂಜೆ ವೇಳೆಗೆ ತಿರಸ್ಕೃತಗೊಂಡ ಹಾಗೂ ಒಪ್ಪಿತವಾದ ನಾಮಪತ್ರಗಳ ವಿವರವನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.ಜೂನ್‌ 3 ರಂದು 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 29, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 24, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 5, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 12, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

RELATED ARTICLES

Latest News