ಬೆಂಗಳೂರು,ಜು.30- ಲೋಕಸಭೆ ಚುನಾವಣೆಯಲ್ಲಿ ಅಕ್ರಮಗಳಾಗಿವೆ ಎಂದು ಆರೋಪ ಮಾಡಿರುವ ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಆ.4 ರಂದು ಬೆಂಗಳೂರಿನಲ್ಲಿ ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್‌ಗಾಂಧಿ ಬೆಂಗಳೂರಿಗೆ ಆಗಮಿಸುವುದರಿಂದ ಆ ದಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ರಾಹುಲ್‌ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿಂದ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಲಿದ್ದಾರೆ.
ಪ್ರತಿಭಟನೆಯ ಬಳಿಕ ಫ್ರೀಡಂ ಪಾರ್ಕ್‌ನಿಂದ ಆಯೋಗದವರೆಗೂ ಪಾದಯಾತ್ರೆ ನಡೆಸಬೇಕೇ, ಬೇಡವೇ ಎಂಬುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸುತ್ತಾರೆ. ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡುವ ಮೂಲಕ ರಾಹುಲ್‌ಗಾಂಧಿಯವರು ತಾವು ಮಾಡಿರುವ ಆರೋಪಗಳನ್ನು ಮತ್ತಷ್ಟು ಗಂಭೀರ ಸ್ವರೂಪಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದರು.
ದೇಶಾದ್ಯಂತ ಚುನಾವಣಾ ಅಕ್ರಮಗಳಾಗಿರುವ ಬಗ್ಗೆ ಆರೋಪಗಳಿದ್ದು, ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ ಕಳ್ಳತನವಾಗಿದೆ ಎಂದು ರಾಹುಲ್‌ಗಾಂಧಿ ಆರೋಪಿಸಿದ್ದರು.ಇದರ ಬಗ್ಗೆ ಆಯೋಗಕ್ಕೆ ದೂರು ನೀಡುವ ಮೂಲಕ ತಮ ಆರೋಪವನ್ನು ಸಾಬೀತುಪಡಿಸಲು ರಾಹುಲ್‌ಗಾಂಧಿ ಮುಂದಾಗಿದ್ದಾರೆ.
ಚುನಾವಣಾ ಆಯೋಗ ರಾಹುಲ್‌ಗಾಂಧಿ ಆರೋಪಗಳನ್ನು ತಳ್ಳಿಹಾಕುತ್ತಲೇ ಬಂದಿದೆ. ಅದಕ್ಕಾಗಿ ಲಿಖಿತ ದೂರು ಹಾಗೂ ಸಮಾಲೋಚನೆ ಮೂಲಕ ರಾಹುಲ್‌ಗಾಂಧಿ ತಮ ಆರೋಪದ ಬಗ್ಗೆ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ತಯಾರಿಯಲ್ಲಿದ್ದಾರೆ.ಒಂದು ವೇಳೆ ರಾಹುಲ್‌ಗಾಂಧಿಯವರ ಆರೋಪ ಸಾಬೀತಾದರೆ ಅದು ವ್ಯಾಪಕ ಚರ್ಚೆಗೆ ಒಳಗಾಗಲಿದೆ. ಇಲ್ಲದೇ ಹೋದರೆ 10 ರಲ್ಲಿ 11 ಎಂಬಂತೆ ರಾಹುಲ್‌ಗಾಂಧಿ ಹೇಳಿಕೆಗಳು ಉಡಾಫೆಯ ಮಾದರಿಯಲ್ಲಿ ಕರಗಿಹೋಗುತ್ತವೆ.
ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಲು 2022 ರಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಆಯೋಜಿಸಲಾಗುವುದು ಹಾಗೂ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2025)
- ಡಿ.ಕೆ. ಸುರೇಶ ಕೆಎಂಎಫ್ ಅಧ್ಯಕ್ಷಗಾದಿ ಕನಸಿಗೆ ನಾನಾ ವಿಘ್ನ
- “ದಿ ರಾಮೇಶ್ವರಂ ಕೆಫೆ” ವತಿಯಿಂದ ಉತ್ತರ ಭಾರತದ ಶೈಲಿಯ “ತೀರ್ಥ” ಕೆಫೆ ಆರಂಭ
- ಆ.1 ರಿಂದ ಬೆಸ್ಕಾಂ ಬಿಲ್ ಪಾವತಿಯ ATP ಸೇವೆ ಸ್ಥಗಿತ
- ಮನೆಯ ಟೆರೇಸ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಮಹಿಳೆ