Wednesday, May 22, 2024
Homeರಾಜ್ಯನಗದು, ಚಿನ್ನ ಸೇರಿದಂತೆ 446.02 ಕೋಟಿ ಮೌಲ್ಯದ ಚುನಾವಣಾ ಅಕ್ರಮಗಳು ಬಯಲಿಗೆ

ನಗದು, ಚಿನ್ನ ಸೇರಿದಂತೆ 446.02 ಕೋಟಿ ಮೌಲ್ಯದ ಚುನಾವಣಾ ಅಕ್ರಮಗಳು ಬಯಲಿಗೆ

ಬೆಂಗಳೂರು,ಏ.29-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 446.02 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ವಜ್ರ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯರವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 2,207 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 1,961 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 140 ಕೋಟಿ ರೂ. ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.ಅಬಕಾರಿ ಇಲಾಖೆಯವರು 177.81 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 48.09 ಕೋಟಿ ರೂ. ಮೊತ್ತದ ವಜ್ರ, ಚಿನ್ನ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ.

ವಾಣಿಜ್ಯ ತೆರಿಗೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆದಾಯ ತೆರಿಗೆ ಅಧಿಕಾರಿಗಳು ಕಲಬುರಗಿ ರೈಲ್ವೇ ನಿಲ್ದಾಣದ ಬಳಿ 1,99,92,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಮತದಾರರ ಸಹಾಯವಾಣಿ ಮೂಲಕ 35,715 ಕರೆಗಳನ್ನು ಸ್ವೀಕರಿಸಿ ಅವುಗಳನ್ನು ವಿಲೇವಾರಿ ಮಾಡಲಾಗಿದೆ. ನಾಗರಿಕರಿಂದ ಎನ್‌ಜಿಆರ್‌ ಪೋರ್ಟಲ್‌ ಮೂಲಕ 20,183 ದೂರುಗಳನ್ನು ದಾಖಲಿಸಿ, 18,314 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

Latest News