Friday, November 22, 2024
Homeರಾಜ್ಯವಿಧಾನಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ

ವಿಧಾನಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಮೇ.4- ವಿಧಾನಪರಿಷತ್‌ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಮತದಾರರ ಪಟ್ಟಿಗೆ ಹೆಸರುಗಳನ್ನು ನೊಂದಾಯಿಸಲು ಮೇ 6 ಕಡೆಯ ದಿನವಾಗಿದೆ.

ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಣ ಕ್ಷೇತ್ರಗಳ ತಲಾ ಒಂದು ಸ್ಥಾನಗಳಿಗೆ ಜೂನ್‌ 3 ರಂದು ಚುನಾವಣೆ ನಡೆಯಲಿದೆ.

ಇದುವರೆಗೂ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡದವರು ಮೇ 6 ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ದಾಖಲಾತಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪದವೀಧರರು ನಮೂನೆ 18 ರಲ್ಲಿ ಹಾಗೂ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಕಡೆಯ ದಿನಾಂಕಗಳಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಆನಂತರ ನೋಂದಾವಣಿಗೆ ಅವಕಾಶ ಇರುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಪದವೀಧರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಅರ್ಹ ಪದವೀಧರರು ನಮೂನೆ 18 ರಲ್ಲಿ ಮೇ 6 ಸಂಜೆ 5.30ರೊಳಗಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದಾಗಿದೆ.

ಹಾಗೆಯೇ ಕರ್ನಾಟಕ ಆಗ್ನೇಯ ಶಿಕ್ಷಕರ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಹರಿಹರ, ಜಗಳೂರು, ದಾವಣಗೆರೆ ತಾಲೂಕುಗಳ ವ್ಯಾಪ್ತಿಯ ಅರ್ಹ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 1,00,100 ಮತದಾರರು ಈತನಕ ನೋಂದಾವಣೆಯಾಗಿದ್ದಾರೆ.

RELATED ARTICLES

Latest News