ಬೆಂಗಳೂರು,ಡಿ.30- ಹೊಸ ವರ್ಷ ಆರಂಭಕ್ಕೂ ಮುನ್ನ ಬೆಸ್ಕಾಂ ಮತ್ತು ಮೆಸ್ಕಾಂ ತಮ್ಮ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 37 ಪೈಸೆ, ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆಯಷ್ಟು ವಿದ್ಯುತ್ ಶುಲ್ಕ ಕಡಿಮೆ ಮಾಡಿದ್ದು ಇದರ ನೇರ ಪ್ರಯೋಜನ ಗ್ರಾಹಕರಿಗೆ ದೊರೆಯಲಿದೆ.
ಪರಿಷ್ಕøತ ವಿದ್ಯುತ್ ಶುಲ್ಕ ಜನವರಿ 1ರಿಂದ ಅನ್ವಯವಾಗಲಿದೆ. ಇದು ಮಾರ್ಚ್ವರೆಗೂ ಅಂದರೆ 3 ತಿಂಗಳು ಚಾಲ್ತಿಯಲ್ಲಿರುತ್ತದೆ. ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡಲು ನಿರ್ಧರಿಸಿ ಈ ರೀತಿ ವಿದ್ಯುತ್ ಶುಲ್ಕ ಪರಿಷ್ಕರಿಸಲಾಗಿದೆ.
ಇತ್ತೀಚೆಗಷ್ಟೇ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಸ್ಕರಿಸಿ ಆದೇಶ ಹೊರಡಿಸಲಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
#Electricity Price Cut