Saturday, July 27, 2024
Homeರಾಜ್ಯಜೂ.25ರಿಂದ ಕೆಎಸ್‌‍ಆರ್‌ಟಿಸಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ ವ್ಯವಸ್ಥೆ ಜಾರಿ

ಜೂ.25ರಿಂದ ಕೆಎಸ್‌‍ಆರ್‌ಟಿಸಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ ವ್ಯವಸ್ಥೆ ಜಾರಿ

ಬೆಂಗಳೂರು,ಜೂ.10– ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೆಎಸ್‌‍ಆರ್‌ಟಿಸಿಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, ಈ ಮೂಲಕ ಪಾವತಿ ಮಾಡಿ ಟಿಕೆಟ್‌ ಖರೀದಿಸುವ ಅವಕಾಶ ಒದಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಎಸ್‌‍ಆರ್‌ಟಿಸಿ ಜೂನ್‌ 25ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ.

ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌‍ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂ. ಬಾಡಿಗೆಯಂತೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಕೆಎಸ್‌‍ಆರ್‌ಟಿಸಿ ಎಂ.ಡಿ.ಅನ್ಬುಕುಮಾರ್‌ ಮಾತನಾಡಿ, ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್‌‍ಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ಪ್ರಯಾಣಿಕರು ಮತ್ತು ಅವರ ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳನ್ನು ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ.

ಇದಕ್ಕೆ ಐದು ವರ್ಷ ಕಾಲದ ಒಪ್ಪಿಗೆ ನೀಡಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕಂಪನಿಯು ಇಟಿಎಂಗಳಿಗೆ ಬ್ಯಾಕೆಂಡ್‌ ಮತ್ತು ಇಂರ್ಟೇಸ್‌‍ ಸಾಫ್‌ವೇರ್‌ ಅನ್ನು ಒದಗಿಸುತ್ತದೆ. ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಯಂತ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೆಎಸ್‌‍ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಡಕ್ಟರ್‌ಗಳು ಆಗಮನ ಮತ್ತು ನಿರ್ಗಮನ ನಿಲ್ದಾಣಗಳನ್ನು ಆಯ್ಕೆ ಮಾಡಬೇಕು, ನಂತರ ಪ್ರಯಾಣಿಕರ ಸಂಖ್ಯೆ, ಪಾವತಿ ವಿಧಾನವನ್ನು ಆರಿಸಬೇಕು. ಬಳಿಕ ದರ ಸ್ವಯಂಚಾಲಿತವಾಗಿ ಲೆಕ್ಕ ಹಾಕಲಾಗುತ್ತದೆ. ಪ್ರಯಾಣಿಕರು ಹಣ ಪಾವತಿಸಿದ ನಂತರ ಟಿಕೆಟ್‌ ಪಡೆಯಬಹುದು. ಯಂತ್ರಗಳನ್ನು ಲಾಕ್‌ ಮಾಡಬಹುದು ಮತ್ತು ಅವುಗಳನ್ನು ಕದ್ದರೆ, ಅವುಗಳನ್ನು ಸಾರ್ಟ್‌ಫೋನ್‌ನಂತೆ ಟ್ರ್ಯಾಕ್‌ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಹ್ಯಾಂಡ್‌ಹೆಲ್ಡ್‌‍ ಇಟಿಎಂಯಲ್ಲಿ ಸಾಧನವಿರಲಿದ್ದು, ಇ-ಪಾಸ್‌‍ಗಳಂತಹ ಸಾರ್ಟ್‌ಕಾರ್ಡ್‌ಗಳನ್ನು ಸ್ಕ್ಯಾನ್‌ ಮಾಡಲು ಮತ್ತು ಮೌಲ್ಯೀಕರಿಸಲು ಕ್ಯಾಮರಾ ಕೂಡ ಇದರಲ್ಲಿರುತ್ತದೆ. ಒಂದು ವೇಳೆ ಸರ್ಕಾರವು ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಸಾರ್ಟ್‌ ಕಾರ್ಡ್‌ಗಳನ್ನು ನೀಡಿದರೆ, ಅದನ್ನೂ ಅಳವಡಿಸಿಕೊಳ್ಳಲು ಈ ಯಂತ್ರಗಳಲ್ಲಿ ಅವಕಾಶ ಇರುತ್ತದೆ.

ಆನ್‌ಲೈನ್‌ ಟಿಕೆಟ್‌ ಕಾಯ್ದಿರಿಸುವಿಕೆ ವ್ಯವಸ್ಥೆಗಳನ್ನು ಟ್ರ್ಯಾಕಿಂಗ್‌ ಮಾಡುವುದು ಮತ್ತು ಖಾಲಿ ಇರುವ ಆಸನಗಳ ಆಧಾರದ ಮೇಲೆ ಟಿಕೆಟ್‌ಗಳನ್ನು ನೀಡುವುದು, ಸ್ಥಳ ಟ್ರ್ಯಾಕಿಂಗ್‌ ಮತ್ತು ಇತರ ಸುಧಾರಿತ ವೈಶಿಷ್ಟ್ಯಗಳಂತಹ ಹಲವು ವೈಶಿಷ್ಟ್ಯಗಳಿವೆ. ಆದರೆ ಅವುಗಳನ್ನು ತಕ್ಷಣವೇ ಸೇರಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತದಲ್ಲಿ ಎಲ್ಲವನ್ನೂ ಅಳವಡಿಸಿಕೊಳ್ಳಲಾಗುವುದು ಎಂದು ಕೆಎಸ್‌‍ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News