ವಾಷಿಂಗ್ಟನ್, ಜು.1 ಅಮೆರಿಕದಲ್ಲಿ ಒನ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಅನುಮೋದನೆ ಸಿಕ್ಕರೆ ಮರುದಿನವೇ ಹೊಸ ಪಕ್ಷವನ್ನು ಕಟ್ಟುವುದಾಗಿ ಎಲಾನ್ ಮಸ್ ಅವರು ಮತ್ತೆ ಟ್ರಂಪ್ ಗೆ ಎಚ್ಚರಿಕೆ ನೀಡಿದ್ದಾರೆ.
ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ಬಿಲಿಯನೇರ್ ಎಲಾನ್ ಮಸ್ಕ್ ಈ ಟ್ರಂಪ್ ವಿರುದ್ಧ ತಿರುಗಿ ಬಿದ್ದಿದ್ದಾರೆ.ಈ ಮಸೂದೆ ತೆರಿಗೆದಾರರ ಮೇಲೆ ಭಾರಿ ಹೊರೆಯಾಗಲಿದೆ ಎಂದು ಮಸ್ಕ್ ಅಭಿಪ್ರಾಯಪಟ್ಟಿದ್ದಾರೆ. ಒಂದೊಮ್ಮೆ ಈ ಬಿಲ್‌ಗೆ ಅನುಮೋದನೆ ಸಿಕ್ಕರೆ ಜನರ ಹಿತಾಸಕ್ತಿಗಳಿಗೆ ನಿಜವಾಗಿಯೂ ಆದ್ಯತೆ ನೀಡುವ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ.
ಈ ಮಸೂದೆಯನ್ನು ಬೆಂಬಲಿಸುವ ಸಂಸದರು ಮುಂದಿನ ವರ್ಷ ಪ್ರಾಥಮಿಕ ಚುನಾವಣೆಯಲ್ಲಿ ಸೋಲನ್ನು ಎದುರಿಸಬೇಕಾಗುತ್ತದೆ ಎಂದು ಮಸ್ತ್ ಸ್ಪಷ್ಟವಾಗಿ ಹೇಳಿದ್ದಾರೆ. ಶನಿವಾರ ಸೆನೆಟ್‌ನಲ್ಲಿ ಮಸೂದೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಮಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡುವುದಾಗಿ ಭರವಸೆ ನೀಡಿ ಈ ಮಸೂದೆಯನ್ನು ಬೆಂಬಲಿಸಿದ ಶಾಸಕರು ನಾಚಿಕೆಪಡಬೇಕು ಎಂದಿದ್ದಾರೆ.
ಮಸೂದೆಯನ್ನು ದುಬಾರಿ ಎಂದು ಕರೆದಿರುವ ಮಸ್ಕ್. ಇದನ್ನು ಪೋರ್ಕಿ ಪಿಗ್ ಪಾರ್ಟಿ ಎಂದಿದ್ದಾರೆ ಈ ಪದವನ್ನು ವ್ಯರ್ಥ ವೆಚ್ಚಕ್ಕೆ ಬಳಸಲಾಗುತ್ತದೆ. ಹೊಸ ರಾಜಕೀಯ ಪಕ್ಷದ ಅಗತ್ಯವನ್ನು ಒತ್ತಿ ಹೇಳಿದ ಅವರು, ಈಗ ಸಾರ್ವಜನಿಕರ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸುವ ಪಕ್ಷವನ್ನು ರಚಿಸುವ ಸಮಯ ಬಂದಿದೆ ಎಂದಿದ್ದಾರೆ.
ಈ ಮಸೂದೆಯು ರಾಷ್ಟ್ರೀಯ ಸಾಲವನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಮೂಲಕ ಮಾಡಿರುವ ಎಲ್ಲಾ ಉಳಿತಾಯವನ್ನು ಹಾಳು ಮಾಡುತ್ತದೆ ಎಂದು ಮಸ್ತ್ ಹೇಳಿದ್ದಾರೆ. ಆದರೆ ಮಸ್ಕ್ ಮತ್ತು ಟ್ರಂಪ್ ನಡುವಿನ ಈ ವಿವಾದವು 2026 ರ ಮಧ್ಯಂತರ ಚುನಾವಣೆಯಲ್ಲಿ ಬಹುಮತಕ್ಕೆ ಅಡ್ಡಿಯಾಗಬಹುದು ಎಂದು ರಿಪಬ್ಲಿಕನ್ ಪಕ್ಷವು ಭಯಪಡುತ್ತದೆ.
- ಐದು ರಾಷ್ಟ್ರಗಳ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ, ಟೀಕಿಸಿದ ಕಾಂಗ್ರೆಸ್
- ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆ ನಿರೀಕ್ಷೆ
- ಬಿಎಸ್ಎಫ್ ಯೋಧನ ಪತ್ನಿ ಮೇಲೆ ಅತ್ಯಾಚಾರ
- ನನಗೆ ಮಂತ್ರಿಗಿರಿಯ ಆಸೆಯಿಲ್ಲ : ರಾಜುಕಾಗೆ
- ಕೋಲಾರದಲ್ಲಿ ರಾಜಕೀಯ ಕಾದಾಟ, ಶಾಸಕರ ನಡುವೆ ಬಹಿರಂಗ ವಾಕ್ಸಮರ