Thursday, September 19, 2024
Homeಬೆಂಗಳೂರುಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ಸಿಕ್ಕಿಬಿದ್ದ ಕಾಮುಕ

ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ಸಿಕ್ಕಿಬಿದ್ದ ಕಾಮುಕ

ಬೆಂಗಳೂರು,ಆ.11- ರೆಸ್ಟೋರೆಂಟ್‌ ಒಂದರ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪೋನ್‌ ಇಟ್ಟು ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ವಿಕೃತ ಮನಸ್ಸಿನ ಹೊಟೇಲ್‌ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮನೋಜ್‌ (23) ಬಂಧಿತ ಆರೋಪಿ.ಈತ ಸದಾಶಿವನಗರ ಠಾಣಾ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಕಾಫಿ ಮಾಡುವ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ಈತನಿಗೆ ಮಹಿಳೆಯರ ಅಸಭ್ಯ ದೃಶ್ಯಗಳನ್ನು ರಹಸ್ಯವಾಗಿ ಸೆರೆ ಹಿಡಿಯುವ ಚಟ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈತ ರೆಸ್ಟೋರೆಂಟ್ನಲ್ಲಿರುವ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್ ಇಟ್ಟು ಮಹಿಳೆಯರ ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಎನ್ನಲಾಗಿದೆ. ಆದರೆ, ಗ್ರಹಚಾರ ಕೈ ಕೊಟ್ಟಿದ್ದರಿಂದ ಇದೀಗ ಆತ ಜೈಲು ಪಾಲಾಗು ವಂತಾಗಿದೆ.

ರೆಸ್ಟೋರೆಂಟ್‌ನ ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರು ಕಸದ ಬುಟ್ಟಿಯಲ್ಲಿಟ್ಟಿದ್ದ ಮೊಬೈಲ್‌ ೇನ್‌ ಕಂಡು ಗಾಬರಿಯಾಗಿ ರೆಸ್ಟೋರೆಂಟ್‌ ಮಾಲೀಕರಿಗೆ ದೂರು ನೀಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹೋಟೆಲ್‌ ಮಾಲೀಕರು ಸದಾಶಿವನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು ದೂರು ದಾಖಲಿಸಿಕೊಂಡ ಪೊಲೀಸರು ಹೋಟೆಲ್‌ನ ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ ಮನೋಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

Latest News