Monday, May 6, 2024
Homeಉದ್ಯೋಗಕಾನೂನು ಪದವೀಧರರಿಗೆ ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ

ಕಾನೂನು ಪದವೀಧರರಿಗೆ ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ

ಬೆಂಗಳೂರು, ಏ.5- ರಾಜ್ಯ ಹೈಕೋರ್ಟ್ನಲ್ಲಿ ಖಾಲಿ ಇರುವ ಲಾ ಕ್ಲರ್ಕ್- ಕಂ-ರೀಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.ಒಟ್ಟು ಎಂಟು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಏ.17ರ ಒಳಗೆ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದೊಂದಿಗೆ ಕಾನೂನು ಪದವಿಯನ್ನು ಶೇ.50ರಷ್ಟು ಅಂಕದೊಂದಿಗೆ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಪರಿಷತ್ನಲ್ಲಿ ನೋಂದಾಯಿಸಿಕೊಂಡಿರಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಪಡಿಸಲಾಗಿದೆ. ಅಭ್ಯರ್ಥಿಗಳು ಕಾನೂನು ವಿಷಯ ಸಂಬಂ„ತ ಕೌಶಲ್ಯವನ್ನು ಹೊಂದಿರಬೇಕು. ಇವರು ನ್ಯಾಯಾಂಗದ ಕೆಲಸದ ಜೊತೆಗೆ ಆಡಳಿತಾತ್ಮಕ ಕೆಲಸದಲ್ಲೂ ಸಹಾಯ ಮಾಡಬೇಕಿರುತ್ತದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25 ಸಾವಿರ ರೂ. ಗೌರವಧನ ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

RELATED ARTICLES

Latest News