ರಾಜಧಾನಿಯಲ್ಲಿ ಮುಂದುವರೆಯಲಿದೆ ಒತ್ತುವರಿ ತೆರವು ಕಾರ್ಯ : ತುಷಾರ್ ಗಿರಿನಾಥ್

Social Share

ಬೆಂಗಳೂರು,ಅ.17- ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೈ ಬಿಡುವ ಪ್ರಶ್ನೆಯೇ ಇಲ್ಲ. ಆದಷ್ಟು ಬೇಗ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದ್ದಾರೆ.

ನಗರದ ಪೂರ್ವ ವಲಯದ ಹೆಣ್ಣೂರು ಮುಖ್ಯ ರಸ್ತೆ, ಬಾಣಸವಾಡಿ ಮತ್ತಿತರ ಪ್ರದೇಶಗಳಿಗೆ ಕಾಲ್ನಡಿಗೆಯಲ್ಲಿ ತೆರಳಿ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕಾಲುವೆ ಒತ್ತುವರಿ ತೆರವಿನಲ್ಲಿ 504 ಸ್ವತ್ತು ಇದೆ. ಎಲ್ಲದಕ್ಕೂ ನೋಟೀಸ್ ನೀಡುತ್ತೇವೆ ನಂತರ ತೆರವು ಕಾರ್ಯ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ನಗರದ ಪೂರ್ವ ವಲಯದಲ್ಲಿ ಇಂದು ಪರಿಶೀಲನೆ ನಡೆಸಿ ಬೀದಿ ದೀಪ, ಪುಟ್ ಪಾತ್ ಒತ್ತುವರಿ, ಅನಧಿಕೃತ ಕೇಬಲ್ ಅಳವಡಿಕೆ, ರಸ್ತೆ ಗುಂಡಿಗಳ ತೆರವಿಗೆ ಸೂಚನೆ ನೀಡಿದ್ದೇನೆ. ಅದೇ ರೀತಿ ಈ ಭಾಗದ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

ಸಾರ್ವಜನಿಕರಿಂದ ದೂರು ಆಲಿಸಿದಾಗ ವಾಸ್ತವ ಅರಿವಾಗಿದೆ. ಹೀಗಾಗಿ ಜನರ ಸಮಸ್ಯೆ ಬಗೆಹರಿಸಲು ಸಹಕಾರಿಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ಜನರ ದೂರನ್ನು ಪರಿಹರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

ಬಾಣಸವಾಡಿ ಕೆರೆ ಒತ್ತುವರಿ ತೆರವು ಬಗ್ಗೆ ದೂರು ಇದೆ. ಆ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದ ಆಯುಕ್ತರು ವಿವರಿಸಿದರು.

ಬಾಣಸವಾಡಿ ಕೆರೆಯ ಸುತ್ತಮುತ್ತ ಕಸ ಹಾಕಿರೋದು. ಅನಕೃತವಾಗಿ ಶೆಡ್ ನಿರ್ಮಾಣ ಹಾಗೂ ರಸ್ತೆ ನಿರ್ಮಿಸಿಕೊಂಡಿರೋದು ನನ್ನ ಗಮನಕ್ಕೆ ಬಂದಿದೆ. ಏ ಎಲ್ಲ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

Articles You Might Like

Share This Article