ಬೆಂಗಳೂರು,ಡಿ.15- ಬನ್ನೇರುಘಟ್ಟ ಸಮೀಪದ ಎ ಎಮ್ ಸಿ ಕಾಲೇಜಿನ ಹಾಸ್ಟೆಲ್‍ನ ಕೊಠಡಿಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಬನ್ನೇರುಘಟ್ಟ ಸಮೀಪ ಎಎಮ್‍ಸಿ ಇಂಜಿನಿಯರಿಂಗ್ ಕಾಲೇಜಿನ ನಿತಿನ್(19) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಕೇರಳ ಮೂಲದ ವಿದ್ಯಾರ್ಥಿಯಾದ ನಿತಿನ್ ಡಿ. 1 ರಂದು ಕಾಲೇಜಿಗೆ ಸೇರ್ಪಡೆಗೊಂಡು ಸಿ ಇ ಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು, ಕ್ಯಾಂಪಸ್ ಒಳಗಿನ ಹಾಸ್ಟೆಲ್‍ನಲ್ಲಿ ವಾಸವಾಗಿದ್ದ. ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್ ಸಹಪಾಠಿ ಬಂದು ಬಾಗಿಲು ಬಡೆದಾಗ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಗೆ ತಿಳಿಸಿದ್ದಾನೆ.
ಎಚ್‍ಡಿಕೆ ಹುಟ್ಟುಹಬ್ಬದ ಅಂಗವಾಗಿ ನಾಳೆ ಶ್ರೀನಿವಾಸ ಕಲ್ಯಾಣ ಮಹೋತ್ಸವ
ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದು ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಸಾವನ್ನಪ್ಪಿರುವುದು ಕಂಡು ಬಂದಿದೆ. ತಕ್ಷಣ ವಾರ್ಡನ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಬೊಮ್ಮಾಯಿ -ಬಿಎಸ್‍ವೈ ನಡುವೆ ಶೀತಲ ಸಮರ..!
ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುವುದರ ಬಗ್ಗೆ ಬನ್ನೇರುಘಟ್ಟ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
engineering, student, body found, hostel,