Homeಮನರಂಜನೆನಟಿಯರ ಕುರಿತು ಅವಹೇಳನಕಾರಿ ಪೋಸ್ಟ್‌ : ಪೊಲೀಸರಿಗೆ ನಟಿ ಐಶ್ವರ್ಯ ಸಿಂಧೋಗಿ ದೂರು

ನಟಿಯರ ಕುರಿತು ಅವಹೇಳನಕಾರಿ ಪೋಸ್ಟ್‌ : ಪೊಲೀಸರಿಗೆ ನಟಿ ಐಶ್ವರ್ಯ ಸಿಂಧೋಗಿ ದೂರು

Derogatory post : Actress Aishwarya Sindhogi files complaint

ಬೆಂಗಳೂರು,ಜು.20-ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್‌ವುಡ್‌ ನಟಿಯರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿರುವುದರ ಮೂಲಕ ನಟಿ ಐಶ್ವರ್ಯ ಸಿಂಧೋಗಿ ಸಂಜಯನಗರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ತಮಗೆ ಪರಿಚಯವಿರುವ ವ್ಯಕ್ತಿಯೇ ನಕಲಿ ಖಾತೆ ತೆರೆದು ಆ ಮೂಲಕ ತಮ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿರುವ ಬಗ್ಗೆ ಐಶ್ವರ್ಯ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಿನಾಕಾರಣ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ. ನಕಲಿ ಖಾತೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಹಿಂದೆಯೂ ಇದೇ ರೀತಿ ಸ್ಯಾಂಡಲ್‌ವುಡ್‌ ನಟಿ ರಮ್ಯಾ ಹಾಗೂ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಕಮೆಂಟ್‌ಗಳ ಮೂಲಕ ನಿಂದಿಸಲಾಗಿತ್ತು.

ಆ ಪ್ರಕರಣಗಳನ್ನೂ ಸಹ ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿದ್ದರು. ಈ ನಡುವೆಯೇ ಐಶ್ವರ್ಯ ಸಿಂಧೋಗಿ ಅವರಿಗೆ ತೇಜೋವದೆಯಂತಹ ಹೇಳಿಕೆ ನೀಡಿರುವ ವ್ಯಕ್ತಿಗಾಗಿ ಶೋಧ ಕೈಗೊಂಡಿದ್ದಾರೆ.

RELATED ARTICLES

Latest News