ಬೆಂಗಳೂರು,ಜ.10-ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಮಂದಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ ಸಾಫ್‌್ಟವೇರ್ ಎಂಜಿನಿಯರ್, ಪೆಟ್ರೋಲ್ ಬಂಕ್ ಮ್ಯಾನೇಜರ್ ಸಹ ಸೇರಿದ್ದಾರೆ.
ಜಾಲ ತಾಣದಲ್ಲಿ ಅಸಭ್ಯ ಸಂದೇಶ ಕಳುಹಿಸಿದ ಬಗ್ಗೆ ವಿಜಯಲಕ್ಷ್ಮೀ ಅವರು ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಇದುವರೆಗೂ 6 ಮಂದಿಯನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.
