Monday, September 1, 2025
Homeರಾಜ್ಯಮೈಸೂರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಅರಮನೆ-ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಅರಮನೆ-ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

Entry to Palace-Chamundi Hills restricted tomorrow in ahead of President's visit to Mysore

ಮೈಸೂರು,ಸೆ.1– ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಇಂದು ನೈಮಿಷಂ ಕ್ಯಾಂಪಸ್‌‍ನಲ್ಲಿರುವ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವದಲ್ಲಿ ಭಾಗವಹಿಸಿ ರಾತ್ರಿ 8 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಕುಟುಂಬದವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸಿ ದೆಹಲಿಗೆ ತೆರಳಲಿದ್ದಾರೆ.ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನದವರೆಗೂ ಅರಮನೆ ಹಾಗೂ ರಾತ್ರಿವರೆಗೂ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಮೈಸೂರು ಪೊಲೀಸ್‌‍ ಆಯುಕ್ತರಾದ ಸೀಮಾ ಲಟ್ಕರ್‌, ಡಿಸಿಪಿಗಳಾದ ಬಿಂದುಮಣಿ, ಸುಂದರ್‌ರಾಜ್‌ ಹಾಗೂ ಸಿಬ್ಬಂದಿಗಳು, ರಾಷ್ಟ್ರಪತಿಗಳು ಭೇಟಿ ನೀಡುವ ಅಖಿಲ ಭಾರತ ವಾಕ್‌ ಶ್ರವಣ ಸಂಸ್ಥೆ, ರಾಡಿಸನ್‌ ಬ್ಲೂ ಹೋಟೆಲ್‌, ಮೈಸೂರು ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಭದ್ರತೆಯನ್ನು ಪರಿಶೀಲಿಸಿದರು.

RELATED ARTICLES

Latest News