ಬೆಂಗಳೂರು, ಜು.23- ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಜು. 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ.
ಬೆಸ್ಕಾಂ ನ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್‌ಲೈನ್ ಸೇವೆಗಳು ಸ್ಥಗಿತವಾಗಲಿದೆ.
ಚೆಸ್ಕಾಂ ನ ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರಿನಲ್ಲಿ ಎರಡು ದಿನ ಆನ್‌ಲೈನ್ ಸೇವೆಗಳು ಅಲಭ್ಯವಾಗಲಿವೆ.
ಹೆಸ್ಕಾಂ ವಿಭಾಗದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಾಪುರ ದಲ್ಲಿ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆಯಲ್ಲಿ ಕೂಡ ಶುಕ್ರವಾರ ರಾತ್ರಿಯಿಂದ ಭಾನುವಾರ ರಾತ್ರಿಯವರೆಗೆ ಆನ್‌ಲೈನ್ ಸೇವೆ ಸ್ಥಗಿತವಾಗಲಿದೆ. ಬಿಲ್ ಪಾವತಿಗಾಗಿ ಹೆಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್ ಗಳಲ್ಲಿ ಈ ಎರಡು 0ದಿನ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕು ಎಂದು ಎಲ್ಲ ಎಸ್ಕಾಂ ಗಳು ಕೋರಿವೆ.
- ಬೆಂಬಲ ಬೆಲೆಯೊಂದಿಗೆ ಮಾವು ಖರೀದಿ ಮಿತಿ 200 ಕ್ವಿಂಟಾಲ್ಗೆ ವಿಸ್ತರಣೆ
- ಧರ್ಮಸ್ಥಳದಲ್ಲಿ ಅಸಹಜ ಸಾವು ಪ್ರಕರಣದ ತನಿಖೆಗೆ 20 ಅಧಿಕಾರಿಗಳ ಎಸ್ಐಟಿ ರಚನೆ
- ಸೆ. 22ರಿಂದ 15 ದಿನ ರಾಜ್ಯದಲ್ಲಿ ಮತ್ತೆ ಜಾತಿ ಸಮೀಕ್ಷೆ
- ಬಿಕ್ಲು ಶಿವ ಕೊಲೆ ಪ್ರಕರಣ : 2ನೇ ಬಾರಿಗೆ ವಿಚಾರಣೆಗೆ ಹಾಜರಾದ ಭೈರತಿ ಬಸವರಾಜ್
- ಜು.25 ರಿಂದ 27ರವರೆಗೆ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ