ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Social Share

ಬೆಂಗಳೂರು,ಫೆ.17-ರಾಷ್ಟ್ರ ಧ್ವಜ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿದೆ.
ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‍ನ ಎಲ್ಲಾ ಸದಸ್ಯರು ಸದನದ ಬಾವಿಗಿಳಿದು ತಮ್ಮ ಪ್ರತಿಭಟನೆ ಮುಂದುವರೆಸಿ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ದೇಶ ದ್ರೋಹಿ ಬಿಜೆಪಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ರಾಜೀನಾಮೆ ನೀಡಬೇಕು. ನಮಗೆ ನ್ಯಾಯ ಬೇಕು. 40 ಪರ್ಸೆಂಟ್ ಕಮಿಷನ್ ಸರ್ಕಾರ, ಆರ್‍ಎಸ್‍ಎಸ್ ಕೈಗೊಂಬೆ ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರಶ್ನೋತ್ತರ ಕಲಾಪ ಮುಗಿಯಲಿ. ಅನೇಕ ಶಾಸಕರ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ನೀವೆಲ್ಲರೂ ಮೊದಲು ನಿಮ್ಮ ನಿಮ್ಮ ಸ್ಥಾನಗಳಿಗೆ ತೆರಳಿ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಇದನ್ನು ಒಪ್ಪದ ಪ್ರತಿಭಟನಾ ನಿರತ ಸದಸ್ಯರು. ನಮಗೆ ಮೊದಲು ನ್ಯಾಯ ಕೊಡಿ. ಈಶ್ವರಪ್ಪ ಅವರಿಂದ ತಕ್ಷಣವೇ ರಾಜೀನಾಮೆ ಪಡೆಯಲು ಸಂಬಂಧಪಟ್ಟವರಿಗೆ ಸೂಚನೆ ನೀಡಿ. ನಮಗೆ ನ್ಯಾಯ ಸಿಕ್ಕರೆ ಈಗಲೇ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪ್ರತಿಭಟನಾ ನಿರತ ಸದಸ್ಯರು ಹೇಳಿದರು.
ಪುನಃ ಸಭಾಧ್ಯಕ್ಷರು ಎಲ್ಲಾ ಸದಸ್ಯರಿಗೂ ತಮ್ಮ ತಮ್ಮ ಸ್ವಸ್ಥಾನಗಳಿಗೆ ಮರಳಬೇಕೆಂದು ಮಾಡಿಕೊಂಡ ಮನವಿ ಪ್ರಯೋಜನವಾಗಲಿಲ್ಲ. ಕೊನೆಗೆ ವಿಯಿಲ್ಲದೆ ಸದನವನ್ನು ಮಧ್ಯಾಹ್ನ 3 ಗಂಟೆವರೆಗೆ ಮುಂದೂಡಿದರು.

Articles You Might Like

Share This Article