ಬೆಲ್ಸಿಯಂ, ಮೇ.3– ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಮಧ್ಯೆ ಇದೀಗ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿವೆ. ಏ.22ರಂದು ಪಹಲ್ಲಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕಾದಾಟ ಜೋರಾಗಿದೆ. ಇದೀಗ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದು, ಪಾಕ್ ವಾಯು ಪ್ರದೇಶವನ್ನು ವಿಮಾನ ಹಾರಾಟಕ್ಕೆ ಬಳಸದಿರಲು ನಿರ್ಧರಿಸಿವೆ.
ಯುರೋಪಿಯನ್ ಒಕ್ಕೂಟ ದೇಶಗಳ ಏರ್ ಫ್ರಾನ್ಸ್, ಬ್ರಿಟಿಷ್ ಏರ್ವೇಸ್ ಮತ್ತು ಸ್ವಿಸ್ ವಿಮಾನಗಳು ಸೇರಿದಂತೆ ಇನ್ನಿತರ ವಿಮಾನಯಾನ ಸಂಸ್ಥೆಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿವೆ.
ಪ್ರತಿಯೊಂದು ದೇಶವು ಯಾವುದೇ ಪ್ರದೇಶದ ಮೇಲೆ ಹಾರಾಟ ನಡೆಸುವಾಗ ತಮ್ಮದೇ ಆದ ಅಪಾಯದ ಮೌಲ್ಯಮಾಪನಗಳನ್ನು ನಡೆಸುತ್ತದೆ. ಹೀಗಾಗಿ ಪಾಕಿಸ್ತಾನ ವಾಯು ಪ್ರದೇಶ ಹಾರಾಟಕ್ಕೆ ಅನುರಕ್ಷಿತ ಸ್ಥಳವೆಂದು ಪರಿಗಣಿಸಿದ್ದು, ನೋಟಮ್ (ವಾಯುಪಡೆಗೆ ಸೂಚನೆ) ನೀಡಿಲ್ಲ. ಆದರೆ ವಾಯುಪ್ರದೇಶವನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಲಾಗಿದೆ.
ಇತ್ತೀಚಿಗಷ್ಟೇ ಭಾರತ ದೇಶವು ಪಾಕ್ ವಾಯು ಪ್ರದೇಶವನ್ನು ಬಳಸುವುದನ್ನು ನಿಲ್ಲಿಸಿತ್ತು. ಇದರ ಬೆನ್ನಲ್ಲೇ ಯುರೋಪಿಯನ್ ದೇಶಗಳು ನಿರ್ಧಾರ ಕೈಗೊಂಡಿದೆ.ಇನ್ನೂ ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ಯುರೋಪಿಯನ್ ಒಕ್ಕೂಟದ ವಿದೇಶಾಂಗ ನೀತಿ ಮುಖ್ಯಸ್ಥೆ ಕಾಜಾ ಕಲ್ಲಾಸ್ ಅವರು ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಪಾಕ್ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಎರಡು ದೇಶಗಳು ಸಂಯಮ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದು, ಗಡಿಗಳಲ್ಲಿ ಉದ್ವಿಗ್ನತೆ ಏರಿಕೆಯಿಂದ ಯಾರಿಗೂ ಯಾವುದೇ ಪ್ರಯೋಜನವಿಲ್ಲ. ಇಬ್ಬರೂ ಸಂಯಮ ವಹಿಸುವಂತೆ ಒತ್ತಾಯಿಸಿದ್ದಾರೆ.