Saturday, May 4, 2024
Homeರಾಜ್ಯರಾಜ್ಯದಲ್ಲಿ ಪ್ರತಿ ದಿನ 5 ಸಾವಿರ ಕೊರೊನಾ ಟೆಸ್ಟ್

ರಾಜ್ಯದಲ್ಲಿ ಪ್ರತಿ ದಿನ 5 ಸಾವಿರ ಕೊರೊನಾ ಟೆಸ್ಟ್

ಬೆಂಗಳೂರು, ಡಿ.26- ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಸಂಖ್ಯೆಯನ್ನು 5 ಸಾವಿರಕ್ಕೆ ನಾಳೆಯಿಂದ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹೊಸತಳಿ ಜೆಎನ್-1 ಪತ್ತೆಯಾಗಿದ್ದು, ಅದನ್ನು ನಿಯಂತ್ರಿಸುವ ಬಗ್ಗೆ ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳ ಲಾವುದು ಎಂದು ತಿಳಿಸಿದರು.

ರಾಜ್ಯದಲ್ಲಿ 34 ಪಾಸಿಟೀವ್ ಕೇಸ್ ಬಂದಿರುವ ಬಗ್ಗೆ ಮಾಹಿತಿ ಇದೆ. ತಜ್ಞರ ಸಭೆಯಲ್ಲಿ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ನಾವು ಕೊರೊನಾ ಟೆಸ್ಟ್ ಹೆಚ್ಚಳ ಮಾಡುತ್ತಿದ್ದೇವೆ. ನಿನ್ನೆ 3500 ಪರೀಕ್ಷೆ ಮಾಡಿದ್ದೇವೆ ಎಂದರು. ಕೊರೊನಾ ಲಸಿಕೆ ನೀಡುವ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಾಸ್ಕ ಧರಿಸಿದ್ದರೆ ಒಳ್ಳೆಯದು ಎಂದು ಹೇಳಿದ್ದೇವೆ. ಆದರೆ, ಮಾಸ್ಕ ಕಡ್ಡಾಯ ಮಾಡಿಲ್ಲ. ಕೊರೋನಾ ಮಾರ್ಗಸೂಚಿಯಲ್ಲಿ ಮಾರ್ಪಡು ಮಾಡುವ ಸಾಧ್ಯತೆ ಇದ್ದರೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರಿನಲ್ಲಿ ಮೂರು ಕಡೆ ಜೆನೋಮಿಕ್ ಸಿಕ್ವೇನ್ಸ್ ಲ್ಯಾಬ್‍ಗಳು ಇವೆ. ಒಂದು ಬಾರಿಗೆ 99 ಟೆಸ್ಟ್ ಮಾಡಬೇಕಾಗುತ್ತದೆ. ಇದಕ್ಕೆ ಒಮ್ಮೆಗೆ 15 ಲಕ್ಷ ರೂ. ಖರ್ಚು ಆಗಲಿದೆ. ಕೊರೊನಾ ಟೆಸ್ಟ್ïಗೆ ಅಗತ್ಯವಿರುವ ಕಿಟ್‍ಗಳು ಲಭ್ಯ ಇವೆ. ಸದ್ಯಕ್ಕೆ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡಲಾಗುವುದು ಎಂದರು.

ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. ಈ ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನು ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ವಲ್ಪ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

RELATED ARTICLES

Latest News