ನವದೆಹಲಿ, ಮೇ 20 (ಪಿಟಿಐ) ನೀವು ಚಲಾಯಿಸುವ ಒಂದು ಮತವು ಅಮೂಲ್ಯ ನೀವು ಹಾಕುವ ಮತ ಈ ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಇಂದಿಲ್ಲಿ ಕರೆ ನೀಡಿದರು.
ಎಕ್್ಸನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನಿಮ್ಮ ಒಂದು ಮತದಿಂದ ಪ್ರತಿ ಬಡ ಕುಟುಂಬದ ಮಹಿಳೆಯ ಖಾತೆಗೆ ವಾರ್ಷಿಕ 1 ಲಕ್ಷ ರೂಪಾಯಿ ಬರಲಿದೆ, ಪ್ರತಿಯೊಬ್ಬ ನಾಗರಿಕರಿಗೂ 25 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ.
ಯುವಕರು 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಪಡೆಯುತ್ತಾರೆ, ಯುವಕರು ವಾರ್ಷಿಕವಾಗಿ 1 ಲಕ್ಷ ಮೌಲ್ಯದ ಶಿಷ್ಯವತ್ತಿಯನ್ನು ಪಡೆಯುತ್ತಾರೆ ಮತ್ತು ನಿಮ ಒಂದು ಮತ ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.ದೇಶದ ಜನತೆ ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು.
ನಿಮ ಒಂದು ಮತವು ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಮತ್ತು ದೇಶವನ್ನು ಬಲಪಡಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.