Friday, November 22, 2024
Homeರಾಜ್ಯಭೀಕರ ಬರಗಾಲವಿದ್ದರೂ ರೈತರಿಗೆ ಸ್ಪಂದಿಸದ ಸರ್ಕಾರ : ಬೊಮ್ಮಾಯಿ ಆಕ್ರೋಶ

ಭೀಕರ ಬರಗಾಲವಿದ್ದರೂ ರೈತರಿಗೆ ಸ್ಪಂದಿಸದ ಸರ್ಕಾರ : ಬೊಮ್ಮಾಯಿ ಆಕ್ರೋಶ

ಬೆಂಗಳೂರು,ಜ.9-ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ನಿಯಲ್ಲಿ ಎಷ್ಟು ಹಣವಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ ಎಂದು ಟೀಕಿಸಿದರು.

18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಮಾತ್ರ ಅಂದರೆ ಶೇ.1ರಷ್ಟೂ ಬಿಡುಗಡೆ ಮಾಡಿಲ್ಲ. ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದೆವು ಎಂದರು.

ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಭಿವೃದ್ದಿ ಕಾಮಗಾರಿಗಳು ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ 3 ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.

ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ

ಸರ್ಕಾರ ಉಳಿಯುವುದಿಲ್ಲ:
ರೈತರು ಶಾಪ ಹಾಕಿದರೆ ಸರ್ಕಾರ ಒಂದು ಕ್ಷಣವೂ ಉಳಿದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಕಳೆದ 70 ವರ್ಷಗಳಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ ಸುಮಾರು 600ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಆ ಕಡೆ ಸರ್ಕಾರ ತಿರುಗಿಯೂ ನೋಡಿಲ್ಲ. ತೀವ್ರ ಬರವಿದ್ದರೂ ರೈತರಿಗೆ ಪರಿಹಾರ ಧನ ತಲುಪಿಸಿಲ್ಲ. ರೈತರಿಗೆ ದಿಕ್ಕು ತೋಚದಂತೆ ಮಾಡಿದ್ದಾರೆ.

ಅನಗತ್ಯವಾಗಿ ಡಿಸಿಎಂ ಹುದ್ದೆಯ ಚರ್ಚೆಗೆ ಖರ್ಗೆ ಆಕ್ರೋಶ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಕಿಂಚಿತ್ತೂ ಮಾನವೀಯತೆ ತೋರಿಲ್ಲ ಎಂದು ಅವರು ವಾಗ್ದಾಳಿ ಮಾಡಿದರು. ನಮ್ಮ ಸರ್ಕಾರ ಅಧಿಕಾರಿದಲ್ಲಿದ್ದಾಗ ಕೇಂದ್ರದ ನೆರವಿಗೆ ಕಾಯದೆ ಡಿಬಿಟಿ ಮೂಲಕ ರೈತರಿಗೆ 3 ಸಾವಿರ ಕೋಟಿ ರೂ. ನೀಡಿದ್ದೆವು. ಆದರೆ ಈ ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ. ರೈತರಿಗೆ ಬರೀ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.

RELATED ARTICLES

Latest News