ಕಮ್ಯೂನಿಸ್ಟ್ ನಾಡು ಕೇರಳದಲ್ಲೂ ಧರ್ಮ ದ್ವೇಷದ ಸದ್ದು, ಮಾಜಿ ಶಾಸಕ ಅರೆಸ್ಟ್

Spread the love

ತಿರುವನಂತಪುರಂ, ಮೇ 1- ಕರ್ನಾಟಕದಿಂದ ಆರಂಭಗೊಂಡ ಧರ್ಮ ದ್ವೇಷದ ಸಂಘರ್ಷ ಕಮ್ಯೂನಿಸ್ಟ್ ನಾಡು ಕೇರಳದಲ್ಲೂ ಸದ್ದು ಮಾಡಿದ್ದು, ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ ಪಿ.ಸಿ.ಜಾರ್ಜ್‍ರನ್ನು ಪೊಲೀಸರು ಭಾನುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ನಿವಾಸದಿಂದ ಜಾರ್ಜ್ ಅವರನ್ನು ಫೋರ್ಟ್ ಪೊಲೀಸ್ ಠಾಣೆಯ ಪೊಲೀಸರು ಮುಂಜಾನೆ ವಶಕ್ಕೆ ತೆಗೆದುಕೊಂಡಿದ್ದಾರೆ. ಶುಕ್ರವಾರ ಅನಂತಪುರಿ ಹಿಂದೂ ಮಹಾ ಸಮ್ಮೇಳನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಜನರನ್ನು ನಿರ್ವಿರ್ಯರನ್ನಾಗಿ ಮಾಡಲು ಮುಸ್ಲಿಂಮರು ನಡೆಸುವ ರೆಸ್ಟೋರೆಂಟ್‍ಗಳಲ್ಲಿ ಚಹಾಕ್ಕೆ ದೌರ್ಬಲ್ಯಕ್ಕೆ ಕಾರಣವಾಗುವ ಅಂಶಗಳನ್ನು ಬೆರೆಸಲಾಗುತ್ತಿದೆ ಎಂದು ಆರೋಪಿಸಿದ್ದರು.

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಸಿದ್ದ 70 ವರ್ಷದ ರಾಜಕಾರಣಿ, ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಕಾಂಗ್ರೆಸ್‍ನ ಮಾಜಿ ನಾಯಕ ಹಾಗೂ ಮಾಜಿ ಶಾಸಕ ಒತ್ತಾಯಿಸಿದ್ದರು. ಆಡಳಿತಾರೂಢ ಸಿಪಿಐ(ಎಂ) ಮತ್ತು ಪ್ರತಿಪಕ್ಷ ಕಾಂಗ್ರೆಸ್ ಅವರ ಹೇಳಿಕೆಯನ್ನು ಖಂಡಿಸಿದ್ದವು.

ಜಾರ್ಜ್ ಮಾಡಿದ ಭಾಷಣ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಶನಿವಾರ ಫೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.’

ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ನಿರ್ದೇಶನದ ಮೇರೆಗೆ ಫೋರ್ಟ್ ಪೊಲೀಸ್ ಠಾಣೆಯ ಪೊಲೀಸರು ಮಾಜಿ ಶಾಸಕನ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದಾರೆ. ಜಾರ್ಜ್ ಅವರನ್ನು ತಿರುವನಂತಪುರಕ್ಕೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments