Sunday, September 8, 2024
Homeರಾಜ್ಯಕಲಬುರಗಿಯ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ ನಿಧನ

ಕಲಬುರಗಿಯ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ ನಿಧನ

ಬೆಂಗಳೂರು, ಮೇ 22- ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ.ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್‌ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಪತ್ನಿ, ಪುತ್ರ ರ್ಇಾನ್‌ ಅಹ್ಮದ್ ಸರಡಗಿ, ಪುತ್ರಿ ಡಾ. ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ. ನಗರದ ಐವಾನ್‌- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ. ಧರ್ಮಸಿಂಗ್‌ ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ ನಗರದಲ್ಲಿ 1944 ಜೂನ್‌ 5ರಂದು ಜನಿಸಿದ ಸರಡಗಿ, ಉಸಾನಿಯಾ ವಿಶ್ವವಿದ್ಯಾಲಯದಿಂದ ಬಿಎ, ಎಲ್‌‍ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌‍ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು.

ಕೇಂದ್ರ ಹಜ್‌ ಸಮಿತಿ, ವಕ್‌್ಫ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.ಕಳೆದ ಕೆಲವು ವರ್ಷದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ಬಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

RELATED ARTICLES

Latest News