Tuesday, September 17, 2024
Homeರಾಜಕೀಯ | Politicsಪಾಳೇಗಾರಿಕೆಯ ಕಾಂಗ್ರೆಸ್‌‍ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ

ಪಾಳೇಗಾರಿಕೆಯ ಕಾಂಗ್ರೆಸ್‌‍ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ

ಬೆಂಗಳೂರು,ಮೇ21-ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್‌‍ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸತೀಶ್‌ ಜಾರಕಿಹೊಳಿ ಅವರ ಸ್ವಕ್ಷೇತ್ರ ಯಮಕನಮರಡಿ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲವನ್ನು ತೀರಿಸಲಾಗದೇ ಪತ್ನಿ, ಪುತ್ರನನ್ನು ನಿಷೇಧಿತ ಜೀತಪದ್ಧತಿಗಿಟ್ಟು, ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್‌ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ನೆರಳಿನ ಭಾಗ್ಯ ಕಲ್ಪಿಸಿಕೊಡುತ್ತಿದೆ. ಈ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಇಂಥ ಹೀನ ಘಟನೆಗಳು ರಾಜ್ಯದಲ್ಲಿ ತಲೆ ಎತ್ತದಂತೆ ಎಚ್ಚರಿಕೆ ವಹಿಸಲಿ ಎಂದು ಸಲಹೆ ಮಾಡಿದ್ದಾರೆ.

ರೈತ ಸಮೂಹಕ್ಕೆ ಆತಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

RELATED ARTICLES

Latest News