Monday, September 16, 2024
Homeರಾಷ್ಟ್ರೀಯ | Nationalತಮಿಳುನಾಡು : ಪಟಾಕಿ ಕಾರ್ಖಾನೆ ಸ್ಫೋಟಕ್ಕೆ ಇಬ್ಬರು ಬಲಿ

ತಮಿಳುನಾಡು : ಪಟಾಕಿ ಕಾರ್ಖಾನೆ ಸ್ಫೋಟಕ್ಕೆ ಇಬ್ಬರು ಬಲಿ

Explosion at Tamil Nadu Fireworks Factory kills 2, injures 4

ಚೆನ್ನೈ,ಸೆ.1- ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಇಬ್ಬರು ಬಲಿಯಾಗಿದ್ದಾರೆ.ಘಟನೆಯಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್‌ (21) ಮತ್ತು ವಿಜಯ್‌ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ವಂ (21), ಪ್ರಶಾಂತ್‌ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ಘೋಷಿಸಿದ್ದಾರೆ.

RELATED ARTICLES

Latest News