Tuesday, February 27, 2024
Homeರಾಜ್ಯಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ

ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ

ಬೆಳಗಾವಿ,ಡಿ.14- ರಾಜ್ಯ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳಲ್ಲಿ ಒಂದಾದ ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಸಂಸ್ಥೆಗಳ ನೌಕರರಿಗೂ ವಿಸ್ತರಣೆ ಮಾಡುವ ಸಂಬಂಧ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿಂದು ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ,ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಸಂಸ್ಥೆಗಳ ನೌಕರರಿಗೆ ಇಲ್ಲ. ಆದರೂ, ಆರ್ಥಿಕ ಸಂಪನ್ಮೂಲಕ್ಕೆ ಅನುಗುಣವಾಗಿ ಲೆಕ್ಕಾಚಾರ ಹಾಕಿ ಅವರನ್ನೂ ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ರ್ನಿಷ್ಟವಾಗಿ ಗುರುತಿಸಲಾಗಿರುವ ಏಳು ಮಾರಣಾಂತಿಕ ರೋಗಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ, ಯೂರಿನರಿ ಚಿಕಿತ್ಸೆಗಳು, ನವಜಾತ ಶಿಶು ಹಾಗೂ ಚಿಕ್ಕಮಕ್ಕಳ ಖಾಯಿಲೆ, ಸುಟ್ಟಗಾಯ ಮತ್ತು ಅಪಘಾತಗಳಿಗೆ ಸಂಬಂಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ವತಿಯಿಂದ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನಗದು ರಹಿತವಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಸಂಜೀವಿನಿ ಯೋಜನೆಯನ್ನು 2015ರಿಂದ ಜಾರಿಗೊಳಿಸಿತ್ತು ಎಂದು ತಿಳಿಸಿದರು.

ಈ ಯೋಜನೆಯನ್ನು ಸರ್ಕಾರಿ ನೌಕರರಿಗೆ ಮಾತ್ರ ರೂಪಿಸಲಾಗಿದೆ. ಯಾವುದೇ ಅನುದಾನಿತ ನೌಕರರು ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಆದರೆ, ಈ ಸಂಬಂಧ ಪರಿಶೀಲನೆ ನಡೆಸಿ ಬದಲಾವಣೆ ಮಾಡಲಾಗುವುದು ಎಂದು ಅವರುಹೇಳಿದರು.ಅನುದಾನಿತ ಪ್ರಾಥಮಿಕ ಶಾಲೆಗಳು 2686ರಷ್ಟಿದ್ದು, ಅಲ್ಲಿ 11677 ಸಿಬ್ಬಂದಿಗಳಿದ್ದಾರೆ. ಪ್ರೌಢ ಶಾಲೆಗಳು 3756 ಇದ್ದು, 24383 ಸಿಬ್ಬಂದಿಗಳಿದ್ದಾರೆ.ಅದೇ ರೀತಿ ಪದವಿ ಪೂರ್ವ ಕಾಲೇಜುಗಳ ಸಂಖ್ಯೆಯೂ 831 ಇದ್ದು, 5848 ರಷ್ಟು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸದನಕ್ಕೆ ತಿಳಿಸಿದರು.

ಮಾರುತಿ 800 ಕಾರಿಗೆ 40 ವರ್ಷ : ಇಂದಿರಾ, ರಾಜೀವ್ ಕೊಡುಗೆ ಸ್ಮರಿಸಿಕೊಂಡ ಜೈರಾಮ್ ರಮೇಶ್

ನಿಮ್ಮ ಸರ್ಕಾರವಿದ್ದಾಗ ಏನು ಮಾಡುತ್ತಿದ್ದೀರಿ? ಈ ಹಿಂದೆ ನಿಮ್ಮದೇ ಸರ್ಕಾರವಿತ್ತು. ಇದರ ಬಗ್ಗೆ ಏಕೆ ಪ್ರಸ್ತಾಪ ಮಾಡಿ ಜಾರಿ ಮಾಡಿಸಲಿಲ್ಲ ಎಂದು ್ರ ಸಿದ್ದರಾಮಯ್ಯ ಅವರು ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ಖಾರವಾಗಿ ಪ್ರಶ್ನಿಸಿದರು. ಬಿಜೆಪಿ ಸದಸ್ಯರು ಎದ್ದು ನಿಂತು, ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ರಹಿತ, ಅನುದಾನಿತ ನೌಕರರಿಗೂ ವಿಸ್ತರಣೆ ಮಾಡಿ ಎಂದು ಕೋರಿದಾಗ, ಈ ಹಿಂದೆ ಹಿಂದೆ ಸರ್ಕಾರವಿತ್ತು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

RELATED ARTICLES

Latest News