ಬೆಂಗಳೂರು, ನ.15- ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಾಪ್ಕಾಮ್ಸೌನಲ್ಲಿ ಏಲಕ್ಕಿ ಬಾಳೆ ಹಣ್ಣಿಗೆ ದರ ನಿಗದಿ
ಹಾಪ್ಕಾಮ್ಸೌ ಸಂಸ್ಥೆಯ ಎಲ್ಲಾ ಮಾರಾಟ ಮಳಿಗೆಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ನ.18ರಿಂದ ನ.30ರವರೆಗೆ ಏಲಕ್ಕಿ ಬಾಳೆಹಣ್ಣನ್ನು ಪ್ರತಿ ಕೆ.ಜಿ.ಗೆ 55 ರೂ.ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಬೆಂಗಳೂರು ಮಹಾನಗರದ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಏಲಕ್ಕಿ ಬಾಳೆ ಹಣ್ಣು ದೊರೆಯು ವಂತೆ ಮಾಡಲಾಗುತ್ತಿದೆ ಎಂದು ಹಾಪ್ಕಾಮ್ಸೌ ಪ್ರಕಟಣೆ ತಿಳಿಸಿದೆ.
ಇತ್ತಿಚಿನ ದಿನಗಳಲ್ಲಿ ಉತ್ತಮ ಮಳೆ ಮತ್ತು ಹಿತಕರ ವಾತಾವರಣದಿಂದಾಗಿ ಏಲಕ್ಕಿ ಬಾಳೆಯ ಉತ್ತಮ ಫಸಲು ಬರುತ್ತಿದೆ. ಇದು ರೈತರಿಗೆ ಸಂತಸ ಉಂಟು ಮಾಡಿದೆ. ಹೀಗಾಗಿ ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಹಾಪ್ಕಾಮ್ಸೌ ಮೇಲಿನಂತೆ ಕ್ರಮ ಕೈಗೊಂಡಿದೆ.