ಬೆಂಗಳೂರು, ಡಿ.15- ದ್ವಿಚಕ್ರ ವಾಹನಗಳ ಹ್ಯಾಂಡ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿ ಐದು ಲಕ್ಷ ಬೆಲೆಬಾಳುವ ಹತ್ತು ದ್ವಿಚಕ್ರ ವಾಹನಗಳು ಹಾಗೂ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ನಗರದ ನಿವಾಸಿಗಳಾದ ಶ್ರೀನಿವಾಸ್ ಅಲಿಯಾಸ್ ಎಕ್ಸ್‍ಎಲ್ ಸೀನ(22) ಮತ್ತು ಸೈಯದ್ ವಾಸೀಮ್ ಅಕ್ರಂ(23) ಬಂಧಿತ ಆರೋಪಿಗಳು. ಈ ಇಬ್ಬರು ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದರಲ್ಲದೆ, ಹ್ಯಾಂಡ್‍ಲಾಕ್ ಮುರಿದು ಕಳ್ಳತನ ಮಾಡಿಕೊಂಡು ಹೋಗಿ ಹೊಸೂರು ಹಾಗೂ ತಮಿಳು ನಾಡಿನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು.
ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನ ಕಳ್ಳತನ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎಚ್‍ಡಿಕೆ ಹುಟ್ಟುಹಬ್ಬದ ಅಂಗವಾಗಿ ನಾಳೆ ಶ್ರೀನಿವಾಸ ಕಲ್ಯಾಣ ಮಹೋತ್ಸವ
ಆರೋಪಿಗಳ ಬಂಧನದಿಂದ ವರ್ತೂರು ಪೊಲೀಸ್ ಠಾಣೆ, ಕೆಆರ್ ಪುರಂ ನ ಎರಡು ಪ್ರಕರಣ, ವೈಟ್‍ಫೀಲ್ಡ್, ಅನಗೊಂಡನಹಳ್ಳಿ, ದೇವನಹಳ್ಳಿ, ಗಿರಿನಗರ, ಬೇಗೂರು, ಜೆಬಿ ನಗರದ ತಲಾ ಒಂದು ಪ್ರಕರಣ ಹಾಗೂ ವರ್ತೂರು ಪೊಲೀಸ್ ಠಾಣೆ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ.
ವೈಟ್‍ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತ ಗಿರೀಶ್ ಮತ್ತು ಮಾರತಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಿಶೋರ್ ಭರಣಿ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಸೋಮಶೇಖರ್ ನೇತೃತ್ವದ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
fake key Use, two-wheeler, theft, Two arrested,