ಖೋಟಾನೋಟು ಚಲಾವಣೆ ಮಾಡುತ್ತಿದ್ದ ಕೇರಳ ಯುವಕನ ಬಂಧನ

Social Share

ಬೆಂಗಳೂರು, ನ.16- ಪೆಟ್ರೋಲ್ ಬಂಕ್‌ಗಳಲ್ಲಿ ಖೋಟಾನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕೇರಳ ರಾಜ್ಯದ ಆರೋಪಿಯನ್ನು ವಿಲ್ಸನ್ಗಾರ್ಡನ್ ಠಾಣೆ ಪೊಲೀಸರು ಬಂಧಿಸಿ 22.500 ರೂ. ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ ಅಖಿಲ್ ಜಾರ್ಜ್ ಬಂಧಿತ ಆರೋಪಿ. ಹೆಚ್ಚು ಹಣವನ್ನು ಗಳಿಸುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದು, ವಿಚಾರಣೆಯಿಂದ ಗೊತ್ತಾಗಿದೆ.

ಲಾಲ್ಬಾಗ್ ಮುಖ್ಯರಸ್ತೆಯಲ್ಲಿರುವ ಎಸ್.ಎಂ. ಕಣ್ಣಪ್ಪ ಆಟೋ ಮೊಬೈಲ್ಸ್ ಎಂಬ ಪೆಟ್ರೋಲ್ ಬಂಕ್ಗೆ ಆರೋಪಿ ಅಖಿಲ್ ಜಾರ್ಜ್ ನ.01ರಂದು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಬಂದು 900 ರೂ. ಗಳಿಗೆ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ.

ಚುನಾವಣೆಯಲ್ಲಿ ಗೆಲವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ 500 ರೂ. ಮುಖಬೆಲೆಯ ಒಂದು ನೋಟು ಹಾಗೂ 100 ರೂ. ಮುಖಬೆಲೆಯ ನಾಲ್ಕು ನೋಟುಗಳನ್ನು ನೀಡಿದ್ದಾರೆ.

ಆತ ನೀಡಿದ್ದ ನೋಟುಗಳ ಪೈಕಿ 500 ರೂ. ಮುಖಬೆಲೆಯ ನೋಟು ತೆಳುವಾಗಿರುವಂತೆ ಕಂಡು ಸಿಬ್ಬಂದಿಗೆ ಅನುಮಾನ ಬಂದಿದೆ. ತಕ್ಷಣ ಅವರ ಬಳಿ ಇದ್ದ 500 ರೂ. ನೋಟನ್ನು ತೆಗೆದು ಈ ನೋಟಿಗೆ ಹೋಲಿಕೆ ಮಾಡಿ ನೋಡಿದಾಗ ವ್ಯತ್ಯಾಸ ಕಂಡು ಬಂದಿದೆ.

ತಕ್ಷಣ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಆಗ ಪೊಲೀಸರು ಬಂಕ್ ಬಳಿ ದಾವಿಸಿ ಆರೋಪಿಯನ್ನು ಕಾರು ಸಮೇತ ನೋಟಿನೊಂದಿಗೆ ಠಾಣೆಗೆ ಕರೆದೊಯ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 22.500 ರೂ. ನಕಲಿ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಹಣವನ್ನು ಯಾವ ವ್ಯಕ್ತಿಯಿಂದ ಪಡೆದಿದ್ದಾನೆ ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಮಾಧ್ಯಮಗಳು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸಲಿ : ಜೆ.ಸಿ.ಮಾಧುಸ್ವಾಮಿ

ಕೇಂದ್ರ ವಿಭಾಗದ ಉಪಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ, ಹಲಸೂರು ಗೇಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಾರಾಯಣ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರಾಜು ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿಯನ್ನು ಬಂಸಿ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

ಪ್ರಶಂಸೆ: ಈ ಉತ್ತಮ ಕಾರ್ಯವನ್ನು ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಅಪರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಪ್ರಶಂಸಿಸಿರುತ್ತಾರೆ.

Articles You Might Like

Share This Article