ನಕಲಿ ಶಿಕ್ಷಕರ ನೇಮಕಾತಿ CID ಪೊಲೀಸರ ದಾಳಿ: ಕೆಲವರು ವಶಕ್ಕೆ

Social Share

ಬೆಂಗಳೂರು, ಅ.20- ನಕಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಂದೂ ಸಹ ಸಿಐಡಿ ಪೊಲೀಸರು ಹಲವು ಕಡೆ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ನಾಲ್ಕು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 38 ಶಿಕ್ಷಕರನ್ನು ಬಂಧಿಸಲಾಗಿದೆ. ಇಂದೂ ಸಹ ಕೆಲವು ಜಿಲ್ಲೆಗಳಲ್ಲಿ ಸಿಐಡಿ ಪೊಲೀಸ್ ತಂಡಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಕೈಗೊಂಡಿವೆ.

ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ

ಸಹ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೂರು ಎಫ್‍ಐಆರ್ ದಾಖಲಾದರೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಎಫ್‍ಐಆರ್ ದಾಖಲಾಗಿದೆ.

ಐಕ್ಯತೆಗೆ ಧಕ್ಕೆ ತರುವ ಶಕ್ತಿಗಳನ್ನು ಸಹಿಸಲ್ಲ : ಆರಗ ಜ್ಞಾನೇಂದ್ರ

ಇದುವರೆಗೂ ಈ ನಾಲ್ಕೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕಾರಿಗಳು ಸೇರಿದಂತೆ 60 ಮಂದಿ ಶಿಕ್ಷಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರಿಗಾಗಿ ಶೋಧ ಮುಂದುವರೆಸಿದ್ದಾರೆ. 2012-13 ಹಾಗೂ 2014-15ನೆ ಸಾಲಿನಲ್ಲಿ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಹಣ ನೀಡಿ ಶಿಕ್ಷಕ ಹುದ್ದೆ ಗಿಟ್ಟಿಸಿಕೊಂಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.

Articles You Might Like

Share This Article