Friday, November 22, 2024
Homeರಾಷ್ಟ್ರೀಯ | Nationalಶ್ರೀರಾಮ ಲಲ್ಲಾ ಸಮಾರಂಭಕ್ಕೆ ರಾಷ್ಟ್ರಪತಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ರಾಹುಲ್‌ ಹೇಳಿದ್ದು ಸುಳ್ಳು

ಶ್ರೀರಾಮ ಲಲ್ಲಾ ಸಮಾರಂಭಕ್ಕೆ ರಾಷ್ಟ್ರಪತಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ರಾಹುಲ್‌ ಹೇಳಿದ್ದು ಸುಳ್ಳು

ನವದೆಹಲಿ.ಮೇ1- ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರಾಕರಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಟ್ರಸ್‌್ಟ , ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ತಮ್ಮ ಭಾಷಣ ದಲ್ಲಿ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಮೂಲದ ಕಾರಣಕ್ಕಾಗಿ ಆಹ್ವಾನಿಸಲಾಗಿಲ್ಲ ಎಂದು ಹೇಳಿದ್ದರು. ಅವರ ಈ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದಾರಿತಪ್ಪಿಸುವಂತಿದೆ ಎಂದು ಆಕ್ಷೇಪಿಸಿದರು.

ಅಯೋಧ್ಯೆಯಲ್ಲಿ ನಡೆದ ಶುಭ ಸಮಾರಂಭಕ್ಕೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ಶ್ರೀರಾಮ್‌ ನಾಥ್‌ ಕೋವಿಂದ್‌ ಅವರನ್ನು ಆಹ್ವಾನಿಸಲಾಗಿತ್ತು ಎಂಬುದನ್ನು ರಾಹುಲ್‌ ಗಾಂಧಿ ಗಮನಕ್ಕೆ ತರಲು ಬಯಸುತ್ತೇವೆ.

ಭಾರತದ ಪ್ರಗತಿಗೆ ಕೊಡುಗೆ ನೀಡಿದ ವಿವಿಧ ಕ್ಷೇತ್ರಗಳ ಸಂತರು, ಕುಟುಂಬಗಳು ಮತ್ತು ಗಣ್ಯರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರನ್ನು ಆಹ್ವಾನಿಸಲಾಯಿತು ಎಂದು ಗೊಂದಲಗಳಿಗೆ ತೆರೆ ಎಳೆದಿದೆ.

ಅಲ್ಲದೆ ಮಂದಿರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಶ್ರಮಿಕರೂ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಪ್ರಾಣ ಪ್ರತಿಷ್ಠಾ ಆಚರಣೆಯ ಸಮಯದಲ್ಲಿಯೂ ಸಹ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ಜಾತಿಗಳಿಗೆ ಸೇರಿದ ಅನೇಕ ಕುಟುಂಬಗಳಿಗೆ ಶ್ರೀ ರಾಮ ಜನ್ಮಭೂಮಿ ಮಂದಿರದ ಮಂಟಪದಲ್ಲಿ ಪೂಜೆ ಮಾಡಲು ಅವಕಾಶ ನೀಡಲಾಯಿತು ಎಂದು ಟ್ರಸ್‌್ಟ ಸಮರ್ಥನೆ ಮಾಡಿಕೊಂಡಿದೆ.

ಸತ್ಯಾಂಶಗಳ ಬಗ್ಗೆ ಸರಿಯಾದ ಅರಿವಿಲ್ಲದೆ ಇಂತಹ ಸುಳ್ಳು, ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಭಾಷಣಗಳನ್ನು ಮಾಡುವುದು ಸಮಾಜದಲ್ಲಿ ಗಂಭೀರ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಬಹುದು. ಆದ್ದರಿಂದ ರಾಹುಲ್‌ ಗಾಂಧಿ ಭಾಷಣದ ದ ಬಗ್ಗೆ ನಮಗೆ ಆಕ್ಷೇಪವಿದೆ ಎಂದು ಟ್ರಸ್‌್ಟ ಅಸಮಾಧಾನ ಹೊರಹಾಕಿದೆ.

RELATED ARTICLES

Latest News