ಬೆಂಗಳೂರಲ್ಲಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Social Share

ಬೆಂಗಳೂರು, ಅ.21- ನಗರದಲ್ಲಿ ಒಂದೇ ಕುಟುಂಬದ ಮೂವರು ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಎಚ್‍ಎಸ್‍ಆರ್ ಲೇಔಟ್ ಮೂರನೇ ಸೆಕ್ಟರ್, 19ನೇ ಮುಖ್ಯರಸ್ತೆ ನಿವಾಸಿ ಗಳಾದ ಸಂತೋಷ್(60) ಇವರ ಪತ್ನಿ ಒಮನಾಸಂತೋಷ್(55), ಮಗಳು ಅನುಷಾ ಸಂತೋಷ್ (18) ಆತ್ಮಹತ್ಯೆ ಮಾಡಿಕೊಂಡಿರುವವರು.
ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಲೆ ನಿರ್ವಹಣೆಗೆ ಪೋಷಕರಿಂದ ವಸೂಲಿ, AAP ವಿರೋಧ

ಕೇರಳ ಮೂಲದವರಾದ ಸಂತೋಷ್ ಅವರು ಹಲವಾರು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಯಂತ್ರಗಳ ಬಿಡಿ ಭಾಗಗಳ ಕಾರ್ಖಾನೆ ನಡೆಸುತ್ತಿದ್ದರು.
ಎಚ್‍ಎಸ್‍ಆರ್ ಲೇಔಟ್‍ನಲ್ಲಿ ವಾಸವಾಗಿದ್ದ ಈ ಕುಟುಂಬ ಇಂದು ಮುಂಜಾನೆ 5.45ರ ಸುಮಾರಿನಲ್ಲಿ ಮನೆಯ ಬಾಗಿಲ ಚಿಲಕವನ್ನು ಹಾಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.

ಇವರ ಮನೆಯೊಳಗಿನಿಂದ ಭಾರಿ ಪ್ರಮಾಣದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ತಕ್ಷಣ ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಎಚ್‍ಎಸ್‍ಆರ್ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ನೋಡಿದಾಗ ಮನೆಯೊಳಗಿದ್ದ ಮೂವರು ಮೃತಪಟ್ಟಿರುವುದು ಕಂಡು ಬಂದಿದೆ.

ಕರ್ತವ್ಯಲೋಪವೆಸಗಿದ ಅರಣ್ಯಾಧಿಕಾರಿಗೆ ಕೋಕ್

ಈ ಕುಟುಂಬ ಸದಸ್ಯರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸಂತೋಷ್ ಅವರು ಕಾರ್ಖಾನೆ ನಡೆಸಲು ಸಾಲ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ಸಂತೋಷ ಅವರ ಸಂಬಂಕರಿಗೆ ಪೊಲೀಸರು ವಿಷಯ ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Articles You Might Like

Share This Article