ಹಾವೇರಿ : ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Social Share

ಹಾವೇರಿ,ಫೆ.23 – ಸಾಲಭಾದೆಯಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದ ಹನುಮಂತ ಗೌಡ ಪಾಟೀಲ(54), ಪತ್ನಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ(20) ಆತ್ಮಹತ್ಯೆಗೆ ಶರಣಾದವರು.

ರಾಜ್ಯಕ್ಕೆ ಬಿಜೆಪಿ ಘಟಾನುಘಟಿ ನಾಯಕರ ಲಗ್ಗೆ

25 ಲಕ್ಷ ರೂ. ಸಾಲ ಮಾಡಿ ಮಗಳ ಮದುವೆಯನ್ನು ಹನುಮಂತ ಗೌಡ ಪಾಟೀಲ ದಂಪತಿ ಮಾಡಿದ್ದಾರೆ. ಆದರೆ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ದಂಪತಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಪ್ಪ-ಅಮ್ಮ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಮಗಳು ನೇತ್ರಾ ತಾನು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಜಾಗತಿಕ ಸಮಸ್ಯೆ ನಿವಾರಿಸುವಲ್ಲಿ ಭಾರತದ ಸಾಧನೆ ಮಹತ್ವದ್ದು : ಬಿಲ್‍ಗೇಟ್ಸ್

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸವಣೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

family, three, members, Suicide,

Articles You Might Like

Share This Article