Friday, November 22, 2024
Homeರಾಜ್ಯಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ

ಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ

ಬೆಂಗಳೂರು,ಜು.4- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರ ಹೆಸರು ಹಾಗೂ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ.

ಮೈಸೂರಿನಲ್ಲಿ ನಡೆದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ವ್ಯಾಪಕ ಟೀಕೆ ಮಾಡುತ್ತಿವೆ. ರಾಜೀನಾಮೆಗೂ ಪಟ್ಟು ಹಿಡಿದಿವೆ. ಆದರೆ ಇವೆಲ್ಲದಕ್ಕೂ ಸೆಡ್ಡು ಹೊಡೆದಂತೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ತಮ ಕೈ ಮೇಲೆ, ಬೆನ್ನ ಮೇಲೆ ಸಿದ್ದರಾಮಯ್ಯ ಅವರ ಹೆಸರನ್ನು ದೊಡ್ಡದಾಗಿ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಿದ್ದರಾಮಯ್ಯನವರ ಭಾವಚಿತ್ರವನ್ನು ಬರೆಸಿಕೊಳ್ಳುತ್ತಿರುವುದು ಗಮನ ಸೆಳೆದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಜೈಲಿನಲ್ಲಿ ನೀಡಲಾಗಿದ್ದ ಖೈದಿ ಸಂಖ್ಯೆಯನ್ನು ಅಭಿಮಾನಿಗಳು ತಮ ಕೈಮೇಲೆ ಟ್ಯಾಟೂ ಹಾಕಿಸಿಕೊಂಡು, ಗಾಡಿಯ ಮೇಲೆ ಬರೆಸಿಕೊಂಡು ಅಭಿಮಾನ ವ್ಯಕ್ತಪಡಿಸಿದ್ದರು.

ಇದೇ ರೀತಿ ಕಾಂಗ್ರೆಸ್ನ ಶಾಸಕ ಲಕ್ಷ್ಮಣ್ ಸವದಿ ಅವರ ಹೆಸರನ್ನೂ ಕೆಲವು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.ಈಗ ಸಿದ್ದರಾಮಯ್ಯ ಅವರ ಪರವಾಗಿ ಅದೇ ರೀತಿಯ ವಿಡಿಯೋಗಳು ವೈರಲ್ ಆಗುತ್ತಿವೆ.

RELATED ARTICLES

Latest News