ಬೆಂಗಳೂರು,ಮಾ.9- ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿ ಶೇ.50ರಿಂದ 75ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಈವರೆಗೂ ಶೇ.40ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಇದನ್ನು ಶೇ.75ಕ್ಕೆ ಏರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಮತ್ತೊಂದು ಬಾರಿ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕೇಂದ್ರ ಸರ್ಕಾರದಿಂದ ನಮಗೆ ಈ ಬಾರಿ ಹೆಚ್ಚಿನ ಅನುದಾನ ಸಿಕ್ಕಿಲ್ಲ. ರಾಜ್ಯ ಸರ್ಕಾರದ ಅನುದಾನದಲ್ಲೇ ನಾವು ಸಬ್ಸಿಡಿ ಕೊಡುತ್ತಿದ್ದೇವೆ. ಹಣಕಾಸಿನ ಲಭ್ಯತೆ ಮೇಲೆ ನಾವು ಹಂತ ಹಂತವಾಗಿ ಯಂತ್ರೋಪಕರಣಗಳ ಖರೀದಿಗೆ ಹಣ ಮಂಜೂರು ಮಾಡುವುದಾಗಿ ಹೇಳಿದರು.
