ದೊಡ್ಡಬಳ್ಳಾಪುರ, ಮೇ 28– ಜಮೀನು ಉಳುಮೆ ಮಾಡುವ ವೇಳೆ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚೆನ್ನಾಪುರ ಬಳಿ ನಡೆದಿದೆ.
ಮೃತರನ್ನು ಚೆನ್ನಾಪುರ ಗ್ರಾಮದ ನಿವಾಸಿ (50) ವರ್ಷದ ಚಂದ್ರಪ್ಪ (ಹೈಟೆಕ್ ಚಂದ್ರು) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಿಗ್ಗೆ ತನ್ನ ಸ್ವಂತ ಜಮೀನಿನಲ್ಲಿ ಉಳುಮೆ ಮಾಡುವಾಗ ಬದುವಿನ ಇಳಿಜಾರಿಗೆ ಇಳಿದ ಟ್ರ್ಯಾಕ್ಟರ್ ಚಕ್ರ ಜಾರಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಘಟನೆಯಲ್ಲಿ ಚಂದ್ರಪ್ಪ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.