ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿಗೆ ರೈತರ ಮುತ್ತಿಗೆ

Social Share

ಬೆಂಗಳೂರು,ಅ.27-ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಜಧಾನಿಗೆ ಮುತ್ತಿಗೆ ಹಾಕಿರುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದರಿಂದ ನಗರದೆಲ್ಲೇಡೆ ವಾಹನ ದಟ್ಟಣೆ ಕಂಡು ಬಂತು.

ರೈತರು ಬೆಳೆಯುವ ಕಬ್ಬಿಗೆ ಬೆಂಬಲ ಬೆಲೆ ನಿಗಪಡಿಸುವಂತೆ ನಾವು ಹಲವಾರು ಭಾರಿ ಒತ್ತಾಯಿಸಿದರು ಸರ್ಕಾರ ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಆನ್‍ಲೈನ್‍ನಲ್ಲಿ ಭೂ ಪರಿವರ್ತನೆ ಪೋಡಿ ಸೌಲಭ್ಯ

ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಬಂದ್ ಮಾಡಿದ್ದೇವೆ ಎಂದು ಅವರು ಹೇಳಿದರು.

ಖರ್ಗೆ AICC ಅಧ್ಯಕ್ಷರಾಗುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ‘ಸಂಚಲನ’

ಹಳೆ ಮದ್ರಾಸ್ ರೋಡ್, ಬೆಂಗಳೂರು ಟೂ ಮೈಸೂರು ರೋಡ್,ಬೆಂಗಳೂರು ಟೂ ಗೋವಾ, ಬೆಂಗಳೂರು ಟೂ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ, ಚೆನ್ನೈ ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು ಟೂ ಮೈಸೂರು ರಾಜ್ಯ ಹೆದ್ದಾರಿ, ಬೆಂಗಳೂರು ಟೂ ಚಾಮರಾಜನಗರ, ಮಾಗಡಿ ರೋಡ್, ಶಿವಮೊಗ್ಗ ರಾಜ್ಯ ಹೆದ್ದಾರಿ ಹಾಗೂ ದೊಡ್ಡಬಳ್ಳಾಪುರ ರಸ್ತೆಗಳಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Articles You Might Like

Share This Article