ಬೆಂಗಳೂರು,ಸೆ.25- ಬೈಕ್‌ನಲ್ಲಿ ಮಗನನ್ನು ಕರೆದುಕೊಂಡು ಹೋಗುತ್ತಿದ್ದಾಗ ವಾಟರ್‌ಟ್ಯಾಂಕರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮೃತಪಟ್ಟಿರುವ ಘಟನೆ ವೈಟ್‌ಫೀಲ್‌್ಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೂಲತಃ ಕೋಲಾರದ ಮುನಿರಾಜು (52) ಮೃತಪಟ್ಟವರು. ಇವರ ಮಗ ಧನಂಜಯಗೌಡ (16) ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಿನ್ನೆ ಬೆಳಗ್ಗೆ 7.45 ರ ಸುಮಾರಿನಲ್ಲಿ ಮುನಿರಾಜು ಅವರು ಬೈಕ್‌ನಲ್ಲಿ ಮಗನನ್ನು ಕರೆದುಕೊಂಡು ನಾಗಗೊಂಡನಹಳ್ಳಿ ಕಡೆಯಿಂದ ಇಮಡಿಹಳ್ಳಿ ಕಡೆಗೆ ಹೋಗುತ್ತಿದ್ದರು. ಇಮಡಿಹಳ್ಳಿ ಮುಖ್ಯ ರಸ್ತೆಯ ಸಾಯಿ ಸನ್‌ಶೈನ್ ಅಪಾರ್ಟ್‌ಮೆಂಟ್ ಮುಂಭಾಗ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿ ಬಂದ ವಾಟರ್‌ಟ್ಯಾಂಕ್ ವಾಹನ ಇವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ-ಮಗ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ.
ಮುನಿರಾಜು ಅವರ ತಲೆ ಹಾಗೂ ಕಾಲಿಗೆ ಗಂಭೀರ ಪೆಟ್ಟಾಗಿದೆ. ತಕ್ಷಣ ಸ್ಥಳೀಯರು ಅವರನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ಬೆಳಗ್ಗೆ 9.40 ರ ಸುಮಾರಿಗೆ ಮೃತಪಟ್ಟಿದ್ದಾರೆ.ಸುದ್ದಿ ತಿಳಿದು ವೈಟ್‌ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.