Tuesday, July 23, 2024
Homeರಾಷ್ಟ್ರೀಯಭಾರತದ ಹಸಿರು ಕ್ರಾಂತಿ ಪಿತಾಮಹ ಸ್ವಾಮಿನಾಥನ್ ಇನ್ನಿಲ್ಲ

ಭಾರತದ ಹಸಿರು ಕ್ರಾಂತಿ ಪಿತಾಮಹ ಸ್ವಾಮಿನಾಥನ್ ಇನ್ನಿಲ್ಲ

ಚೆನ್ನೆ ೈ, ಸೆ.28- ಭಾರತದ ಹಸಿರು ಕ್ರಾಂತಿಯ ಪಿತಾಮಹ, ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾದ ಎಂಎಸ್ ಸ್ವಾಮೀನಾಥನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಚನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, 98 ವರ್ಷದ ಎಂಎಸ್ ಸ್ವಾಮೀನಾಥನ್ ಅವರು ಪತ್ನಿ ಮೀನಾ, ಪುತ್ರಿಯರಾದ ಸೌಮ್ಯ, ಮಧುರಾ ಮತ್ತು ನಿತ್ಯಾ ಅವರನ್ನು ಬಿಟ್ಟು ಅಗಲಿದ್ದಾರೆ. ಸ್ವಾಮೀನಾಥನ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಶ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ,ದೇವೇಗೌಡ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

1925 ಆ.7ರಂದು ತಮಿಳುನಾಡಿನ ತಂಭಾರತದ ವೂರಿನಲ್ಲಿ ಜನಿಸಿದ್ದ ಎಂಎಸ್ ಸ್ವಾಮೀನಾಥನ್ ಅವರು ಓರ್ವ ಕೃಷಿ ವಿಜ್ಞಾನಿಯಾಗಿ, ಸಸ್ಯ ಶಾಸ್ತ್ರಜ್ಞರಾಗಿ, ಭಾರತದ ಕೃಷಿ ಬೆಳವಣಿಗೆ ರೈತರ ತಳ ಆದಾಯ ಹೆಚ್ಚಳ, ಭತ್ತದ ತಳಿಗಳ ಅಭಿವೃದ್ಧಿ ಸೇರಿದಂತೆ ಕೃಷಿ ಕ್ಷೇತ್ರದಲ್ಲಿ ಅವರ ಸಾಧನೆ ಅನನ್ಯ. ಈಗಾಗಿಯೇ ಅವರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲಾಗುತ್ತಿತ್ತು.

ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದೆಂದರೆ ವಿದೇಶೀ ರೈತರನ್ನು ಶ್ರೀಮಂತರನ್ನಾಗಿಸುವ ಕೈಂಕರ್ಯಎಂಬುದು ಸ್ವಾಮಿನಾಥನ್ ಅವರ ಬಲವಾದ ಅಭಿಪ್ರಾಯವಾಗಿತ್ತು. ಆದ್ದರಿಂದ ಭಾರತ ದೇಶವನ್ನು ಎಲ್ಲ ರೀತಿಯ ಆಹಾರ ಧಾನ್ಯಗಳ ಆಮದುಗಳಿಂದ ಮುಕ್ತವಾಗಿಸಬೇಕೆಂಬುದು ಅವರ ಅಭಿಲಾಷೆಯಾಗಿತ್ತು.

1966ರ ವರ್ಷದಲ್ಲಿ ಸ್ವಾಮಿನಾಥನ್ ಅವರು ನವದೆಹಲಿಯ ಭಾರತೀಯ ವ್ಯವಸಾಯ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡರು. ಭಾರತೀಯ ಕೃಷಿಕರ ಮೂಲ ಅವಶ್ಯಕತೆಗಳ ಕುರಿತಾಗಿ ನೇರವಾದ ಅನುಭವ ಪಡೆಯುವ ನಿಟ್ಟಿನಲ್ಲಿ ಸ್ವಾಮಿನಾಥನ್ ಅವರು, ಮಣ್ಣಿನ ಮಕ್ಕಳಾದ ರೈತರೊಂದಿಗೆ ತಾವೂ ಬೆರೆತು ಕೈಕೆಸರು ಮಾಡಿಕೊಂಡು ಅಹರ್ನಿಶಿ ದುಡಿದರು.

ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ

ಸ್ವಾಮಿನಾಥನ್ ಅವರು ಸಿದ್ಧಪಡಿಸಿದ್ದ ವರದಿಯನ್ನು ಮೆಚ್ಚಿದ ರಾಕ್ ಫೆಲ್ಲರ್ ಪ್ರತಿಷ್ಠಾನ ಅವರಿಗೆ ಆರ್ಥಿಕ ಸಹಾಯ ನೀಡಲು ಮುಂದೆ ಬಂದದ್ದರ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಸ್ವಾಮಿನಾಥನ್, ಮಿಶ್ರತಳಿ ಗೋ ಬೀಜಗಳನ್ನು ಅಭಿವೃದ್ಧಿಪಡಿಸಿದರು. ಇದರ ಬಳಕೆಯ ದೆಸೆಯಿಂದಾಗಿ ಗೋ ಉತ್ಪನ್ನದಲ್ಲಿನ ಇಳುವರಿ ಹಲವು ಪಟ್ಟು ಹಿರಿದಾಗಿತ್ತು.

ಈ ತೆರನಾದ ಗೋಧಿ ಬೀಜಗಳು ರೈತರಲ್ಲಿ ಸಂತಸ ಸಂಭ್ರಮೋತ್ಸಾಹಗಳನ್ನು ಮೂಡಿಸಿ ಬಹಳಷ್ಟು ರೈತರು ಪ್ರಯೋಜನ ಪಡೆಯಲಾರಂಭಿಸಿದರು. ಆಧುನಿಕ ಬೇಸಾಯ ಪದ್ಧತಿಗಳ ಅಳವಡಿಕೆಯಿಂದಾಗುವ ಪ್ರಯೋಜನಗಳನ್ನು ರೈತಾಪಿ ಜನರಿಗೆ ಮನನ ಮಾಡಿಕೊಡುವುದಕ್ಕಾಗಿ ಡಾ. ಸ್ವಾಮಿನಾಥನ್ ಅವರು ದೆಹಲಿಯ ಆಸುಪಾಸಿನಲ್ಲಿ ಸುಮಾರು 2000 ಪ್ರಾತಿನಿಕ ತೋಟಗಳನ್ನು ನಿರ್ಮಿಸಿದರು.

ತಮ್ಮ ಅಭಿವೃದ್ಧಿಶೀಲ ಕಾಯಕದ ಪ್ರಥಮ ಹಂತದಲ್ಲಿ, 18000 ಟನ್‍ಗಳ ಮೆಕ್ಸಿಕನ್ ಗೊಯ ಬೀಜಗಳನ್ನು ಆಮದು ಮಾಡಿಕೊಳ್ಳುವ ಪ್ರಸ್ತಾಪವನ್ನು ಸರ್ಕಾರದ ಮುಂದಿರಿಸಿದರು. ಸ್ವಾಮಿನಾಥನ್ ಅವರ ಕಾರ್ಯ ವೈಖರಿಯಲ್ಲಿದ್ದ ಹುಮ್ಮಸ್ಸು ಮತ್ತು ಸಾಧ್ಯತೆಗಳನ್ನು ಮನಗಂಡ ಸರ್ಕಾರ ಸ್ವಾಮಿನಾಥನ್ ಅವರಿಗೆ ಉತ್ತಮ ಬೆಂಬಲ ನೀಡಿತು.

ಡಾ. ಸ್ವಾಮಿನಾಥನ್ ಅವರು 1990ರ ವರ್ಷದಲ್ಲಿ ಎಂ.ಎಸ್. ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್ ಸಂಸ್ಥೆಯನ್ನು ಚೆನ್ನೈನಲ್ಲಿ ಸ್ಥಾಪಿಸಿ ಕೃಷಿಕ್ಷೇತ್ರದಲ್ಲಿನ ತಮ್ಮ ಕೊಡುಗೆಯನ್ನು ನಿರಂತರವಾಗಿ ಮುಂದುವರೆಸಿದ್ದರು. ಈ ಸಂಸ್ಥೆ ಭಾರತೀಯ ಹಳ್ಳಿಗರ ಆರ್ಥಿಕ ಸ್ವಾವಲಂಬನೆಗಾಗಿ ಮಹತ್ವದ ಕಾಯಕ ನಡೆಸುತ್ತಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ

ಹೀಗೆ ಸ್ವಾಮಿನಾಥನ್ ಅವರ ಬದುಕು ಕಠಿಣ ಪರಿಶ್ರಮ ಮತ್ತು ಅರ್ಪಣಾ ಮನೋಭಾವಗಳ ಉದ್ದೀಪನ ಶಕ್ತಿಯಾಗಿದ್ದು ದೇಶಭಕ್ತಿಯ ಹಾದಿಯಲ್ಲಿ ಒಬ್ಬ ವ್ಯಕ್ತಿ ಯಾವ ರೀತಿ ಬದುಕಬೇಕೆಂಬುದಕ್ಕೆ ಮಾದರಿಯಂತಿತ್ತು. ಟೈಮ್ಸ್ ಪತ್ರಿಕೆ 1999ರ ವರ್ಷದಲ್ಲಿ ಸ್ವಾಮಿನಾಥನ್ ಅವರನ್ನು 20ನೇ ಶತಮಾನದ 20 ಪ್ರಭಾವಪೂರ್ಣ ವ್ಯಕ್ತಿಗಳಲ್ಲಿ ಒಬ್ಬರೆಂದು ಹೆಸರಿಸಿ ಭಾರತಕ್ಕೆ ಗೌರವ ಸಲ್ಲಿಸಿತು. ಈ ಪಟ್ಟಿಯಲ್ಲಿದ್ದ ಇನ್ನಿಬ್ಬರು ಭಾರತೀಯರೆಂದರೆ ಮಹಾತ್ಮ ಗಾಂಧಿ ಮತ್ತು ರಬೀಂದ್ರನಾಥ ಠಾಗೂರರು.
ಪ್ರಶಸ್ತಿ ಗೌರವಗಳು

  1. 1971ರಲ್ಲಿ ಅವರಿಗೆ ಮ್ಯಾಗ್ಸೇಸೆ ಪ್ರಶಸ್ತಿ
  2. ಭಾರತ ಸರ್ಕಾರದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪುರಸ್ಕಾರದಂತಹ ಮಹತ್ವದ ಪ್ರಶಸ್ತಿಗಳೆಲ್ಲವೂ ಅವರಿಗೆ ಸಂದಿವೆ.
  3. 1986ರ ವರ್ಷದಲ್ಲಿ ಅವರಿಗೆ ಆಲ್ಬರ್ಟ್ ಐನ್ಸ್ಟೀನ್ ಪ್ರಶಸ್ತಿ
  4. 1987ರಲ್ಲಿ ಪ್ರಥಮ ವಿಶ್ವ ಆಹಾರ ಪ್ರಶಸ್ತಿಗಳ ಗೌರವ
  5. 1991ರಲ್ಲಿ ಅವರಿಗೆ ಅಮೆರಿಕದ ಟೈಲರ್ ಪುರಸ್ಕಾರ
  6. 1999ರ ವರ್ಷದಲ್ಲಿ ಯುನೆಸ್ಕೋದ ಗಾಂ ಸ್ವರ್ಣ ಪುರಸ್ಕಾರ
RELATED ARTICLES

Latest News