ಜಲೌನ್,ಜೂ.6-ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮೀನಾಮೇಷ ಎಣಿಸಿದ್ದರಿಂದ ಮನನೊಂದ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಜಲೌನ್ ಅಕೋ ಗ್ರಾಮದಲ್ಲಿ ನಡೆದಿದೆ. ಪೊಲೀಸರ ಈ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದು ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪೊಲೀಸರು ಬೇಜವಬ್ದಾರಿನ ಕುರಿತಂತೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಲೌನ್ ಎಎಸ್ಪಿ ಅಸೀಮ್ ಚೌಧರಿ ಭರವಸೆ ನೀಡಿದ್ದಾರೆ. ಅಕೋ ಗ್ರಾಮದಲ್ಲಿ 2 ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು.
ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದಾಗ ಸಂತ್ರಸ್ತೆಯ ತಂದೆ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಆದರೆ ಪೊಲೀಸರಿಗೆ ಎಫ್‍ಐಆರ್ ದಾಖಲಿಸುವಲ್ಲಿ ವಿಳಂಬವಾಗಿದೆ. ಇದಕ್ಕೆ ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಡಿಶಾ ರೈಲು ಅಪಘಾತ : ಇನ್ನೂ ಪತ್ತೆಯಾಗಿಲ್ಲ 101 ಮೃತದೇಹಗಳು ಗುರುತು
ಪೊಲೀಸರ ವಿರುದ್ಧ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸಿಒ ಕೊಂಚ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.24 ಗಂಟೆಗಳಲ್ಲಿ ವರದಿ ತರುತ್ತೇವೆ.ತಪ್ಪಿತಸ್ಥರು ಯಾರೇ ಆಗಿದ್ದರೂ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಎಂದು ಅಸೀಮ್ ಚೌಧರಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
Father, #MinorRape, #Victim, #Dies, #Suicide, #Delay, #Case,