ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಹೈಕೋರ್ಟ್ ಆದೇಶ

Social Share

ನಾಗ್ಪುರ, ಅ.21- ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಆದೇಶ ನೀಡಿದೆ. ಇತ್ತೀಚೆಗೆ ದಾರಿಹೋಕರ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವುದನ್ನು ನ್ಯಾಯಾಲಯ ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಆದೇಶವನ್ನು ನೀಡಿದೆ.

ಬೀದಿ ನಾಯಿಗಳ ವಿರುದ್ಧದ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧವೂ ಅಪರಾಧ ಪ್ರಕರಣಗಳನ್ನು ದಾಖಲಿಸುವಂತೆ ಹೈಕೋರ್ಟ್‍ನ ನಾಗ್ಪುರ ಪೀಠ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಸುನಿಲ್ ಸುಕ್ರೆ ಮತ್ತು ಅನಿಲ್ ಪನ್ಸಾರೆ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಬೀದಿ ನಾಯಿಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದ್ದು, ಅವುಗಳ ಹಾವಳಿ ತಡೆಯುವಂತೆ ಸೂಚನೆ ನೀಡಲಾಗಿದೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರಿಡಲು ಪ್ರಸ್ತಾವನೆ

ಬೀದಿ ನಾಯಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ವಿಜಯ್ ತಲೆವಾರಿ ಮತ್ತು ಮನೋಜ್ ಶಾಕ್ಯ ಎಂಬುವವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಬೀದಿ ನಾಯಿಗಳಿಂದ ಗಾಯಗೊಂಡಿರುವ ನಾಗರಿಕರಿಗೆ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದರು.

ಮಹಾನಗರ ಪಾಲಿಕೆ ಮೌನ: ನಾಗ್ಪುರದಲ್ಲಿ ಒಂದು ಲಕ್ಷ ಬೀದಿ ನಾಯಿಗಳಿವೆ ಎಂದು ಅಂದಾಜಿಸಲಾಗಿದೆ.
2018ರಲ್ಲಿ ಇದರ ಸಂಖ್ಯೆ 81 ಸಾವಿರ ಇತ್ತು. ಇವುಗಳ ನಿಯಂತ್ರಣಕ್ಕೆ ಮಹಾನಗರ ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಇವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಅರ್ಜಿದಾರರು ವಾದ ಮಂಡಿಸಿದ್ದರು.

Articles You Might Like

Share This Article