ಬೆಂಗಳೂರು,ಜ.24- ಯಾರಾದರೂ ಹೆಣ್ಣು ಭ್ರೂಣ ಪತ್ತೆ ಮಾಡುವುದು ಬೆಳಕಿಗೆ ಬಂದರೆ ಅಂತಹ ಚಿಕಿತ್ಸಾ ಕೇಂದ್ರ ಗಳ ಲೈಸೆನ್ಸ್‍ಗಳನ್ನು ಮುಲಾ ಜಿಲ್ಲದೆ ರದ್ದುಪಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಪತ್ತೆ ಮಾಡುವುದನ್ನು ನಿಷೇಧ ಮಾಡಲಾಗಿದೆ. ಇದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಹಾಗೊಂದು ವೇಳೆ ಯಾರಾದರೂ ಪತ್ತೆ ಮಾಡುವುದು ಕಂಡುಬಂದರೆ ಅಂಥವರ ಲೈಸೆನ್ಸ್‍ಗಳನ್ನು ರದ್ದುಪಡಿಸುತ್ತೇವೆ ಎಂದು ಹೇಳಿದರು.
ಕೆಲವು ರೇಡಿಯೋಲಾಜಿಸ್ಟ್ ತಾಂತ್ರಿಕ ಸಿಬ್ಬಂದಿ ಮತ್ತು ವೈದ್ಯರು ಇಂತಹ ಪ್ರಕರಣಗಳಲ್ಲಿ ಶಾಮೀಲಾಗುತ್ತಾರೆ ಎಂಬ ಆರೋಪ ಕೇಳಿಬಂದಿದೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ ಎಂದು ಗುಡುಗಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿವೆ. ಗಂಡು, ಹೆಣ್ಣು ಎಂಬ ಬೇಧವಿಲ್ಲದೆ ಎಲ್ಲರೂ ಸಮಾನತೆಯಿಂದ ಬದುಕಬೇಕು. ಇದೇ ಕಾರಣಕ್ಕಾಗಿ ಭ್ರೂಣ ಪತ್ತೆ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದೆ. ಇದಕ್ಕೆ ಪ್ರತಿಯೊಬ್ಬರು ಮನವಿ ಮಾಡಿದರು.
